ಮೈಸೂರು

ಅರವಳಿಕೆ ನೀಡಿ ಹುಲಿ ಸೆರೆ ಹಿಡಿದ ಸಿಬ್ಬಂದಿಗಳು

ಹೆಚ್.ಡಿ.ಕೋಟೆ ತಾಲೂಕಿನ ನಾಗನಹಳ್ಳಿ ಹೆಗ್ಗಡಪುರ ಗ್ರಾಮದಲ್ಲಿ ಸಾಕು ಪ್ರಾಣಿಗಳನ್ನು ಕೊಂದು ತಿಂದು‌ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ  ಹುಲಿ ಕೊನೆಗೂ ಸೆರೆ ಸಿಕ್ಕಿದೆ.

ಅರಣ್ಯ ಇಲಾಖಾ ಸಿಬ್ಬಂದಿಗಳು ಒಂದು ವರ್ಷದ ಗಂಡು ಹುಲಿಗೆ ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಕಳೆದ ಹದಿನೈದು ದಿನಗಳಿಂದ  ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿ ಅರಣ್ಯ ಇಲಾಖೆ ಸಿಬ್ಬಂದಿಗಳಿಗೂ ಚಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗುತ್ತಿದ್ದ ಹುಲಿಯೀಗ ಬೋನಿನಲ್ಲಿ ಬಂಧಿಯಾಗಿದೆ.
ಡಾ.ಉಮಾಶಂಕರ್ ಅವರ ಮಾರ್ಗದರ್ಶನದಲ್ಲಿ ಕರೀಂ ಎಂಬವರು ಈ ಹುಲಿಗೆ ಅರವಳಿಕೆ ನೀಡಿದ್ದರು. ಇದನ್ನು ಮೈಸೂರಿನ ಕೇರ್ಗಳ್ಳಿ ಬಳಿ ಇರುವ ಪ್ರಾಣಿ ಮನೆಗೆ ಅಂದರೆ ನೂತನ ಮೃಗಾಲಯಕ್ಕೆ ಕೊಂಡೊಯ್ಯಲಾಗಿದೆ. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: