ಮೈಸೂರು

ಚಿಕನ್ ಸಾರಿನ ಪಾತ್ರೆಯಲ್ಲಿ ಬಿದ್ದು ವ್ಯಕ್ತಿ ಸಾವು

ಚಿಕನ್ ಸಾರಿನ ಪಾತ್ರೆಯಲ್ಲಿ ಆಕಸ್ಮಿಕವಾಗಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ಮೈಸೂರಿನ ಉದಯಗಿರಿಯಲ್ಲಿ ನಡೆದಿದೆ.

ಮೃತನನ್ನು ರಮೇಶ್ (21) ಎಂದು ಗುರುತಿಸಲಾಗಿದೆ.  ಈತ 15 ದಿನಗಳ ಹಿಂದೆ  ಕಾರ್ಯಕ್ರಮದಲ್ಲಿ ಅಡುಗೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಚಿಕನ್ ಸಾರಿನ ಪಾತ್ರೆಯನ್ನು ಸಾಗಿಸುವಾಗ ಆಕಸ್ಮಿಕವಾಗಿ ಜಾರಿ ಪಾತ್ರೆಯಲ್ಲೇ ಬಿದ್ದು ಗಾಯಗೊಂಡು ಕೆ.ಆರ್.ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದ ಎನ್ನಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ  ಮುಂಜಾನೆ ಸಾವನ್ನಪ್ಪಿದ್ದಾನೆ.

ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: