ಮೈಸೂರು

ರಸ್ತೆ ದಾಟುತ್ತಿದ್ದ ವೇಳೆ ಗುದ್ದಿದ ಕಾರು : ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಸಾವು

ರಸ್ತೆ ದಾಟುತ್ತಿದ್ದ ಪಾದಚಾರಿಯೋರ್ವರಿಗೆ ಹುಂಡೈ ಕಾರೊಂದು ಗುದ್ದಿದ ಪರಿಣಾಮ ಪಾದಚಾರಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೃತರನ್ನು ಯಾದವಗಿರಿಯ ಸಂಕಲ್ಪ ಅಪಾರ್ಟ್ ಮೆಂಟ್ ನಲ್ಲಿ ವಾಚ್ ಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀನಿವಾಸ ಮೂರ್ತಿ ಎಂದು ಗುರುತಿಸಲಾಗಿದೆ. ಇವರು ಮಾರ್ಚ್.21ರಂದು ನೆಲ್ಸನ್ ಮಂಡೇಲಾ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ವೇಗವಾಗಿ ಬಂದ ರಾಯಚೂರಿನ ಕಾರ್ತಿಕ್ ಗೌಡ ಎಂಬವರಿಗೆ ಸೇರಿದ ಹುಂಡೈ ಕಾರು ಬಲವಾಗಿ ಗುದ್ದಿದೆ. ಗುದ್ದಿದ ಪರಿಣಾಮ ತಲೆಗೆ ಗಂಭೀರವಾಗಿ ಏಟು ಬಿದ್ದಿದ್ದು, ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಎನ್.ಆರ್.ಸಂಚಾರಿ ಠಾಣೆಯಲ್ಲಿ ದೂರು ದಾಖಲಾಗಿದೆ. (ಕೆ.ಎಸ್-ಎಸ್.ಎಚ್)

 

Leave a Reply

comments

Related Articles

error: