ಮೈಸೂರು

ಮುಷ್ಕರ ನಿರತ ಅಂಗನವಾಡಿ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

ಮುಷ್ಕರ ನಿರತ ಅಂಗನವಾಡಿ ನೌಕರರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮೈಸೂರಿನಲ್ಲಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ವತಿಯಿಂದ ಪ್ರತಿಭಟನೆ ನಡೆಯಿತು.

ಮೈಸೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಅಂಗನವಾಡಿ ನೌಕರರು ಶಿಶು ಆರೈಕೆ, ಆರೋಗ್ಯ ಸೇವೆ ಸೇರಿದಂತೆ ಹಲವಾರು ಕಾರ್ಯ ನಿರ್ವಹಿಸುತ್ತಿದ್ದಾರೆ. ಇಷ್ಟೆಲ್ಲ ಕಾರ್ಯ ನಿರ್ವಹಿಸಿದರೂ ಸರ್ಕಾರ ಇವರನ್ನು  ಸಂಪೂರ್ಣವಾಗಿ ನಿರ್ಲಕ್ಷ್ಯಿಸುತ್ತಿದೆ. ಅವರು ರಸ್ತೆಯಲ್ಲೇ ಮಲಗಿ ಮುಷ್ಕರ ನಡೆಸುತ್ತಿದ್ದರೂ ಸರ್ಕಾರ ಚಕಾರವೆತ್ತಿಲ್ಲ. ಇವರ ಹೋರಾಟವನ್ನು ಸರ್ಕಾರ ನಿರ್ಲಕ್ಷ್ಯಿಸಿದೆ. ಕೂಡಲೇ  ಅಂಗನವಾಡಿ ನೌಕರರ ವೇತನವನ್ನು 10ಸಾವಿರಕ್ಕೆ ಹಾಗೂ ಸಹಾಯಕಿಯರ ವೇತನವನ್ನು 7,500ರೂ.ಗೆ ಏರಿಸಬೇಕು. ಕೆಲಸದಲ್ಲಿ ಆಗುವ ಕಿರುಕುಳವನ್ನು ತಪ್ಪಿಸಬೇಕು. ಸೇವಾ ನಿಯಮ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪ್ರಧಾನ ಕಾರ್ಯದರ್ಶಿ ಬಿ.ಜಯರಾಂ, ಎನ್.ಕೆ.ಬಾಲಾಜಿರಾವ್, ಜಗದೀಶ್ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: