ದೇಶಪ್ರಮುಖ ಸುದ್ದಿ

ಅಮಿತ್‍ ಷಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದ ಎಸ್.ಎಂ.ಕೃಷ್ಣ

ನವದೆಹಲಿ : ಹಿರಿಯ ರಾಜಕಾರಣಿ ಎಸ್‍.ಎಂ.ಕೃಷ್ಣ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‍ ಷಾ ಸಮ್ಮುಖದಲ್ಲಿ ಇಂದು ಬುಧವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅಮಿತ್ ಶಾ ಅವರು ಕೃಷ್ಣ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಬಿಜೆಪಿ ಸೇರಿದ ಬಳಿಕ ಮಾತನಾಡಿದ ಕೃಷ್ಣ, ರಾಜಕೀಯದಲ್ಲಿ ಬಹು ದೊಡ್ಡ ಪ್ರಯಾಣ ಮಾಡಿದ್ದೇನೆ. ನನ್ನ ಪ್ರಯಾಣ ಈಗ ಅತ್ಯಂತ ಪ್ರಮುಖ ನಿಲ್ದಾಣಕ್ಕೆ ಬಂದು ನಿಂತಿದೆ ಎಂದು ಮಾರ್ಮಿಕ ಮಾತುಗಳನ್ನಷ್ಟೇ ಹೇಳಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಭಾರತ ಅಭಿವೃದ್ಧಿ ಕಾಣುತ್ತಿದೆ ಮೋದಿ ನಾಯಕತ್ವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿ.ವಿ. ಸದಾನಂದಗೌಡ, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್ ಅವರು ಈ ಸಂದರ್ಭ ಉಪಸ್ಥಿತರಿದ್ದರು.

ಸುಮಾರು 50 ವರ್ಷಗಳ ಕಾಲ ಕಾಂಗ್ರೆಸ್‍ನಲ್ಲಿದ್ದ 84 ವರ್ಷದ ಎಸ್.ಎಂ.ಕೃಷ್ಣ ಅವರು ಇತ್ತೀಚಿಗೆ ತಮ್ಮ ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಪಕ್ಷಕ್ಕೆ ರಾಜಿನಾಮೆ ನೀಡಿದ್ದರು.

(ಎಸ್‍ಎನ್‍/ಎನ್‍.ಬಿ.ಎನ್‍)

 

Leave a Reply

comments

Related Articles

error: