
ಪ್ರಮುಖ ಸುದ್ದಿ
ಜೂ.4 ರಂದು ಕಂದಾಯ ಸಚಿವ ಆರ್.ಅಶೋಕ್ ಕೊಡಗು ಭೇಟಿ
ರಾಜ್ಯ( ಮಡಿಕೇರಿ) ಜೂ.2 :- ಕಂದಾಯ ಸಚಿವ ಆರ್.ಅಶೋಕ್ ಅವರು ಜೂ.4 ರಂದು ಬೆಳಗ್ಗೆ 11 ಗಂಟೆಗೆ ಜಂಬೂರು ಗ್ರಾಮದಲ್ಲಿ ಪ್ರವಾಹ ಸಂತ್ರಸ್ತರಿಗೆ ನಿರ್ಮಿಸಿದ ಮನೆಗಳ ಹಸ್ತಾಂತರ ಮತ್ತು ಮಧ್ಯಾಹ್ನ 12.30 ಗಂಟೆಗೆ ಮದೆ ಗ್ರಾಮದಲ್ಲಿ ನಿರ್ಮಿಸಿದ ಮನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಆರ್.ಪ್ರಶಾಂತ್ ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)