ಮೈಸೂರು

ಎಸ್.ಎಂ ಕೃಷ್ಣ ಬಿಜೆಪಿ ಸೇರ್ಪಡೆಯಿಂದ ಪಕ್ಷಕ್ಕೆ ಮತ್ತಷ್ಟು ಬಲ ಹೆಚ್ಚಿದೆ : ಬಿ.ಎಸ್.ಯಡಿಯೂರಪ್ಪ

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಬಿಜೆಪಿ ಸೇರ್ಪಡೆಯಿಂದಾಗಿ ರಾಜ್ಯದಲ್ಲಿ ಬಿಜೆಪಿ  ಪಕ್ಷದಲ್ಲಿ ಮತ್ತಷ್ಟು ಬಲ  ಹೆಚ್ಚಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆಯಿಂದ ಬೆಂಗಳೂರಿನಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಸಹಕಾರಿಯಾಗಲಿದೆ. ಎಸ್.ಎಂ.ಕೃಷ್ಣರವರು ಇಂದು ಪ್ರಧಾನಿ ನರೇಂದ್ರಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಕೃಷ್ಣ ಅವರು ಬೆಂಗಳೂರಿಗೆ ಬರುವುದು ಖಚಿತವಾಗುತ್ತಿದ್ದಂತೆ ನಾನು ಕೂಡ ಬೆಂಗಳೂರಿಗೆ ತೆರಳಿ ಅವರನ್ನು ನಮ್ಮ ಪಕ್ಷದ ಕಚೇರಿಗೆ ಬರಮಾಡಿಕೊಳ್ಳುತ್ತೇನೆ ಎಂದರಲ್ಲದೇ ಎರಡು ಕ್ಷೇತ್ರದ ಉಪಚುನಾವಣೆ ಪ್ರಚಾರಕ್ಕೆ ಕೃಷ್ಣರನ್ನು ಕರೆತರಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ನಂಜನಗೂಡು, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆ ಪೂರಕ ವಾತಾವರಣ ನಿರ್ಮಾಣವಾಗಿದ್ದು, ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. (ಎಸ್.ಎನ್.ಎಸ್.ಎಚ್)

Leave a Reply

comments

Related Articles

error: