ಕರ್ನಾಟಕಪ್ರಮುಖ ಸುದ್ದಿ

ಮೆಕ್ಕೆ ಜೋಳ, ಹೂ ಬೆಳೆಗಾರರಿಗೆ ಪರಿಹಾರ ನೀಡುವ ಕಾರ್ಯಕ್ಕೆ ಚಾಲನೆ: 666 ಕೋಟಿ ರೂ. ಪರಿಹಾರ ಮೊತ್ತ ಬಿಡುಗಡೆ

ಬೆಂಗಳೂರು,ಜೂ.2-ಕೊರೊನಾ ಲಾಕ್ ಡೌನ್ ನಿಂದಾಗಿ ಸಂಕಷ್ಟಕೀಡಾಗಿದ್ದ ಮೆಕ್ಕಿ ಜೋಳ ಹಾಗೂ ಹೂವು ಬೆಳೆಗಾರರಿಗೆ ಪರಿಹಾರ ನೀಡುವ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಚಾಲನೆ ನೀಡಿದರು.

ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಜೋಳ ಹಾಗೂ ಹೂವು ಬೆಳೆಗಾರರಿಗೆ 666 ಕೋಟಿ ರೂಪಾಯಿಗಳ ಪರಿಹಾರ ಮೊತ್ತವನ್ನು ಆನ್ಲೈನ್ ಮೂಲಕ ರೈತರ ಖಾತೆಗೆ ಬಿಡುಗಡೆ ಮಾಡಿದರು. ನಂತರ ಸ್ವತಃ ತಾವೇ ರೈತರಿಗೆ ಕರೆ ಮಾಡಿ ಪರಿಹಾರ ಹಣ ಖಾತೆಗಳಿಗೆ ವರ್ಗಾವಣೆ ಆಗಿರುವುದನ್ನು ಖಾತ್ರಿಪಡಿಸಿಕೊಂಡರು.

ಕೊರೊನಾ ವೈರಸ್ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ಡೌನ್ಘೋಷಿಸಿದ್ದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ತಮ್ಮ ಬೆಳೆಯನ್ನು ಮಾರಾಟ ಮಾಡಲಾಗದೆ ಭಾರಿ ನಷ್ಟ ಅನುಭವಿಸಿದ್ದರು. ಹಿನ್ನೆಲೆಯಲ್ಲಿ ರಾಜ್ಯ ಸರಕಾರ ರೈತರಿಗೆ ಪರಿಹಾರ ಘೋಷಣೆ ಮಾಡಿತ್ತು.

ಒಂದು ಹೆಕ್ಚೇರ್ಗೆ 25,000 ರೂ., 10 ಲಕ್ಷ ಮೆಕ್ಕೆ ಜೋಳ ರೈತರಿಗೆ ತಲಾ 5000 ರೂ. ಪರಿಹಾರ ಧನವನ್ನು ಸರ್ಕಾರ ಘೋಷಿಸಿತ್ತು.

ಕೋವಿಡ್ ಹಿನ್ನೆಲೆಯಲ್ಲಿ ಕಳೆದ 3 ತಿಂಗಳಿನಿಂದ ಕೆಲಸಕ್ಕೆ ಹಾಜರಾಗದ 150 ಹಾಪ್ಕಾಮ್ಸ್ ನೌಕರರ ವಿರುದ್ಧ ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಎಸ್ವೈ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಜ್ಯದ 550 ಹಾಪ್ಕಾಮ್ಸ್ ಮಳಿಗೆಗಳ ಪೈಕಿ ಕೇವಲ 250 ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದು . ಮಳಿಗೆ ತೆರೆಯದೇ ಇರುವವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಬೇಕೆಂದು ಸಿಎಂ ಸೂಚಿಸಿದರು.

ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಹುತೇಕ ಇಲ್ಲವಾಗಿದೆ. ಹೊಸ ಕೊಳವೆಬಾವಿಗಳನ್ನು ಕೊರೆಯಲು ಅನುಮತಿ ನೀಡಬಾರದು. ಒಂದು ತಿಂಗಳ ನಂತರ ಪರಿಸ್ಥಿತಿಯನ್ನು ಪರಿಶೀಲಿಸಿ ತೀರ್ಮಾನಿಸಬಹುದು ಎಂದು ಅಧಿಕಾರಿಗಳಿಗೆ ಯಡಿಯೂರಪ್ಪ ತಿಳಿಸಿದರು.

ವೇಳೆ ತೋಟಗಾರಿಕೆ, ಪೌರಾಡಳಿತ, ರೇಷ್ಮೆ ಸಚಿವ ಡಾ.ನಾರಾಯಣಗೌಡ, ಗೃಹ ಸಚಿವ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ.ಪಾಟೀಲ್, ಕಂದಾಯ ಸಚಿವ ಆರ್ ಅಶೋಕ್ ಮತ್ತಿತರು ಉಪಸ್ಥಿತರಿದ್ದರು. (ಎಂ.ಎನ್)

Leave a Reply

comments

Related Articles

error: