ದೇಶಪ್ರಮುಖ ಸುದ್ದಿವಿದೇಶ

ಪ್ರಧಾನಿ ನರೇಂದ್ರ ಮೋದಿ -ಅಮೆರಿಕ ಅಧ್ಯಕ್ಷ ಟ್ರಂಪ್ ನಡುವೆ ದೂರವಾಣಿ ಮಾತುಕತೆ : ಅನೇಕ ವಿಷಯಗಳ ಕುರಿತು ಚರ್ಚೆ

ದೇಶ(ನವದೆಹಲಿ)ಜೂ.3:-   ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಂಗಳವಾರ ಸಂಜೆ ಸುದೀರ್ಘ ದೂರವಾಣಿ ಸಂಭಾಷಣೆ ನಡೆಸಿದರು. ಇಂಡೋ-ಚೀನಾ ಗಡಿ ಉದ್ವಿಗ್ನತೆ, ಕೊರೋನಾ ಬಿಕ್ಕಟ್ಟು ಮತ್ತು ವಿಶ್ವ ಆರೋಗ್ಯ ಸಂಸ್ಥೆಯ ಸುಧಾರಣೆಗಳ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದರು ಎನ್ನಲಾಗಿದೆ.

ಅದೇ ವೇಳೆ ಜಿ -7 ರ ಶೃಂಗ ಸಭೆಯಲ್ಲಿ ಪಾಲ್ಗೊಳ್ಳುವಂತೆ ಅಮೇರಿಕ ಅಧ್ಯಕ್ಷ ಟ್ರಂಪ್ ಕೂಡ   ಪಿಎಂ ಮೋದಿಯವರನ್ನು ಆಹ್ವಾನಿಸಿದ್ದಾರೆ ಎನ್ನಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿಯಲ್ಲಿ ಸಂಭಾಷಣೆ ನಡೆಸಿದ್ದಾರೆ. ಈ ಸಂಭಾಷಣೆಯಲ್ಲಿ ಉಭಯ ದೇಶಗಳಲ್ಲಿನ ಕೊರೋನಾ ವೈರಸ್ ಪರಿಸ್ಥಿತಿ ಮತ್ತು ಭಾರತ-ಚೀನಾ ಗಡಿ ವಿಚಾರ ಸೇರಿದಂತೆ ಅನೇಕ ಮಹತ್ವದ ವಿಚಾರದ ಕುರಿತು ಚರ್ಚೆ ನಡೆಸಲಾಗಿದೆ ಎಂದು ಪ್ರಧಾನಿ ಸಚಿವಾಲಯ ತಿಳಿಸಿದೆ.

ಫೋನ್ ಮಾತುಕತೆಯ ನಂತರ, ಪ್ರಧಾನಿ ನರೇಂದ್ರ ಮೋದಿ ಅವರೇ ಟ್ವೀಟ್ ಮಾಡಿ, “ನನ್ನ ಸ್ನೇಹಿತ ಅಧ್ಯಕ್ಷ ಟ್ರಂಪ್ ಅವರೊಂದಿಗೆ ನಾನು ಪ್ರೋತ್ಸಾಹದಾಯಕ ಮತ್ತು ಅರ್ಥಪೂರ್ಣ ಸಂಭಾಷಣೆ ನಡೆಸಿದ್ದೇನೆ. ಈ ಸಮಯದಲ್ಲಿ ಕೊರೋನಾ ಬಿಕ್ಕಟ್ಟು, ಜಿ -7 ರ ಪ್ರಸ್ತುತ ಯುಎಸ್ ಅಧ್ಯಕ್ಷತೆ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ” ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಭಾರತ ಮತ್ತು ಅಮೆರಿಕ ನಡುವಿನ ಸಂಬಂಧಗಳು ಕೋವಿಡ್ ನಂತರದ ವಿಶ್ವ ರಚನೆಯ ಬಲವಾದ ಆಧಾರಸ್ತಂಭವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಉಭಯ ನಾಯಕರ ನಡುವೆ ಸುಮಾರು 25 ನಿಮಿಷಗಳ ದೂರವಾಣಿ ಸಂವಹನದ ನಂತರ ವಿದೇಶಾಂಗ ಸಚಿವಾಲಯ ಹೇಳಿಕೆ ನೀಡಿದ್ದು, “ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಟ್ರಂಪ್ ನಡುವೆ ಇಂಡೋ-ಚೀನಾ ಗಡಿ ಉದ್ವಿಗ್ನತೆಯ ಬಗ್ಗೆ ಚರ್ಚೆ ನಡೆಯಿತು ಎಂದಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: