ಮೈಸೂರು

ಸಿದ್ದರಾಮಯ್ಯನವರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿರುವ ಪುನೀತ್ ಕೆರೆಹಳ್ಳಿಯನ್ನು ಬಂಧಿಸುವಂತೆ ದೂರು

ಮೈಸೂರು,ಜೂ.3:- ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿರುವ ಪುನೀತ್ ಕೆರೆಹಳ್ಳಿ ಎಂಬ ಸಮಾಜಘಾತುಕನನ್ನು ಈ ಕೂಡಲೇ ಕ್ರಿಮಿನಲ್ ಮೊಕದ್ದಮೆಯಡಿಯಲ್ಲಿ ಬಂಧಿಸುವಂತೆ ಕೋರಿ ದೇವರಾಜ ಪೊಲೀಸ್ ಠಾಣೆ ಇನ್ಸಪೆಕ್ಟರ್ ಅವರಿಗೆ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ  ದೂರು ನೀಡಲಾಯಿತು.

ಈ ಸಂದರ್ಭ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಮಾತನಾಡಿ ಪುನೀತ್ ಕೆರೆಹಳ್ಳಿ ಎಂಬ ವ್ಯಕ್ತಿಯು ಎರಡು ಮೂರು ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ, ಹಾಲಿ ವಿರೋಧ ಪಕ್ಷದ ನಾಯಕರು ಮತ್ತು ರಾಜ್ಯಾದ್ಯಂತ ಹಾಗೂ ದೇಶಾದ್ಯಂತ ಕೋಟ್ಯಂತರ ಮಂದಿ ಹಿಂಬಾಲಕರು ಮತ್ತು ಅಭಿಮಾನಿಗಳನ್ನು ಹೊಂದಿರುವಂತಹ  ಸಿದ್ದರಾಮಯ್ಯನವರನ್ನು ಫೇಸ್ ಬುಕ್ ಮುಖಾಂತರ ಅತ್ಯಂತ ಕೆಟ್ಟ ಪದಗಳನ್ನು ಬಳಸಿ ಅವಾಚ್ಯವಾಗಿ ಬೈದಿರುತ್ತಾನೆ. ಇದು ಎರಡ್ಮೂರು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗುತ್ತಿದ್ದು ಕೋಟ್ಯಂತರ ಮಂದಿ ಮನಸ್ಸಿಗೆ ಮತ್ತು ಅವರ ಭಾವನೆಗಳಿಗೆ ಧಕ್ಕೆಯುಂಟು ಮಾಡಿದೆ. ಇಂತಹ ಸಮಾಜಘಾತಕರನ್ನು ಈ ಕೂಡಲೇ ಕ್ರಿಮಿನಲ್ ಮೊಕದ್ದಮೆ ಹೂಡಿ ಬಂಧಿಸಬೇಕು ಎಂದರು.

ಈ ಸಂದರ್ಭ ನಗರಾಧ್ಯಕ್ಷ ಆರ್.ಮೂರ್ತಿ, ಮುಖಂಡರಾದ ಚಂದ್ರಶೇಖರ್ ಮತ್ತಿತರರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: