ಪ್ರಮುಖ ಸುದ್ದಿ

ಇಡೀ ದೇಶವು ಮಹಾರಾಷ್ಟ್ರ ಮತ್ತು ಗುಜರಾತ್ ಜನರೊಂದಿಗೆ ನಿಂತಿದೆ : ‘ನಿಸರ್ಗ’ ಚಂಡಮಾರುತದ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಹೇಳಿಕೆ  

ದೇಶ(ನವದೆಹಲಿ)ಜೂ.3:-  ನಿಸರ್ಗ ಚಂಡಮಾರುತದ ಸ್ವರೂಪವನ್ನು ಗಮನದಲ್ಲಿಟ್ಟುಕೊಂಡು ಜಾಗರೂಕರಾಗಿರಿ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ   ಮಹಾರಾಷ್ಟ್ರ ಮತ್ತು ಗುಜರಾತ್ ಜನರಿಗೆ ಮನವಿ ಮಾಡಿದ್ದು, ಈ ಕಷ್ಟದ ಸಮಯದಲ್ಲಿ ಇಡೀ ದೇಶ ತಮ್ಮೊಂದಿಗೆ ನಿಂತಿದೆ ಎಂದು ಹೇಳಿದ್ದಾರೆ.

ಚಂಡಮಾರುತ ನಿಸರ್ಗ್ ಮಹಾರಾಷ್ಟ್ರ ಮತ್ತು ಗುಜರಾತ್ ತಲುಪುತ್ತಿದೆ ಎಂದು ಅವರು ಟ್ವೀಟ್ ಮಾಡಿದ್ದು, ಈ ಕಷ್ಟದ ಸಮಯದಲ್ಲಿ ಇಡೀ ದೇಶವು ನಿಮ್ಮೊಂದಿಗೆ ನಿಂತಿದೆ. ನಿಮ್ಮ ಬಗ್ಗೆ ಕಾಳಜಿ ವಹಿಸಿ ಜಾಗರೂಕರಾಗಿರಿ, ಸುರಕ್ಷಿತವಾಗಿರಿ. ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.

“ಭಾರತ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಚಂಡಮಾರುತವು ಉತ್ತರ ಮಹಾರಾಷ್ಟ್ರ ಮತ್ತು ದಕ್ಷಿಣ ಗುಜರಾತ್ ತೀರಗಳನ್ನು ಸಂಜೆ ತಡವಾಗಿ ತಲುಪುವ ನಿರೀಕ್ಷೆಯಿದೆ.

ಚಂಡಮಾರುತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರ ಮತ್ತು ಗುಜರಾತ್ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದಾರೆ, ಸಾಧ್ಯವಿರುವ ಎಲ್ಲ ಸಹಾಯವನ್ನು ಕೇಂದ್ರವು ನೀಡುವ ಭರವಸೆ ನೀಡಿದೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸಭೆ ನಡೆಸಿದರು. ಈ ಸಭೆಯಲ್ಲಿ ಪಿಎಂ ಮೋದಿ ಅವರು ಗೃಹ ಸಚಿವರು ಮತ್ತು ಎನ್‌ಡಿಎಂಎ, ಎನ್‌ಡಿಆರ್‌ಎಫ್ ಜೊತೆ ಚಂಡಮಾರುತಕ್ಕೆ ಸಂಬಂಧಿಸಿದ ಸಿದ್ಧತೆಗಳನ್ನು ಪರಿಶೀಲಿಸಿದರು. ಇದೇ ವೇಳೆ ಕೇಂದ್ರದಿಂದ ರಾಜ್ಯಕ್ಕೆ ಎಲ್ಲಾ ರೀತಿಯ ಸಹಾಯವನ್ನು ನೀಡಬೇಕು ಎಂದು ನಿರ್ದೇಶಿಸಲಾಗಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: