ಕರ್ನಾಟಕ

ನಿಸರ್ಗ ಚಂಡಮಾರುತ: ಚಿಕ್ಕಮಗಳೂರಿನಲ್ಲಿ ಗಾಳಿ, ಮಳೆ

ಚಿಕ್ಕಮಗಳೂರು,ಜೂ.3-ನಿಸರ್ಗ ಚಂಡಮಾರುತದಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದೆ.

ಬೃಹತ್ ಗಾತ್ರದ ಮರಗಳು ಧರೆಗೆ ಉರುಳಿ ಬಿದ್ದಿವೆ. ಮೂಡಿಗೆರೆಯ ಜನ್ನಾಪುರಅಣಜೂರು ಬಳಿ ಮರ ಉರುಳಿ ಬಿದ್ದಿದ್ದರಿಂದ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ.

ಮರಗಳು ಬಿದ್ದಿದ್ದರಿಂದ ವಿದ್ಯುತ್ ಕಂಬಗಳು ಸಹ ಧರೆಗುರುಳಿದೆ. ಮಲೆನಾಡಿನಾದ್ಯಂತ ಭಾರೀ ಗಾಳಿ ಮಳೆಯ ಮುನ್ಸೂಚನೆಯನ್ನೂ ಹವಾಮಾನ ಇಲಾಖೆ ನೀಡಿದೆ. ಕಳೆದ ಎರಡು ದಿನಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗಲಿದೆ ಎಂದೂ ತಿಳಿದುಬಂದಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಮುಂಜಾನೆ ತುಂತುರು ಮಳೆ ಆರಂಭವಾಗಿ, ಮೋಡ ಮುಸುಕಿದ ವಾತಾವರಣ ಮುಂದುವರೆದಿದೆ.

ಚಂಡಮಾರುತದಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ 11 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯ ಎಚ್ಚರಿಕೆಯನ್ನು ಮುನ್ನವೇ ಹವಾಮಾನ ಇಲಾಖೆ ನೀಡಿದ್ದು, ಮಲೆನಾಡು ಭಾಗದಲ್ಲಿ ಗಾಳಿ, ಮಳೆಯ ಅಬ್ಬರ ಜೋರಾಗಿದೆ. (ಎಂ.ಎನ್)

Leave a Reply

comments

Related Articles

error: