ದೇಶಪ್ರಮುಖ ಸುದ್ದಿ

ಆರ್‍.ಕೆ.ನಗರ ಉಪಚುನಾವಣೆಯಲ್ಲಿ ಯಾರನ್ನೂ ಬೆಂಬಲಿಸಲ್ಲ : ರಜನಿಕಾಂತ್ ಸ್ಪಷ್ಟನೆ

ಚೆನ್ನೈ: ಆರ್‍.ಕೆ.ನಗರ ಉಪಚುನಾವಣೆಯಲ್ಲಿ ತಾವು ಯಾರನ್ನೂ ಬೆಂಬಲಿಸುವುದಿಲ್ಲ ಎಂದು ನಟ ರಜನಿಕಾಂತ್ ಹೇಳಿದ್ದಾರೆ.

ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ನಿಧನದ ಬಳಿಕ ತೆರವಾಗಿರುವ ಆರ್‌ ಕೆ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಏ.12ರಂದು ನಡೆಯಲಿದೆ. ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸಂಗೀತ ನಿರ್ದೇಶಕ ಗಂಗೈ ಅಮರನ್ ಅವರು ರಜನಿಕಾಂತ್ ಅವರನ್ನು ಭೇಟಿಯಾಗಿದ್ದರು.

ಈ ಭೇಟಿ ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿತ್ತು. ರಜನಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುತ್ತಿದ್ದಾರೆ. ಬಿಜೆಪಿ ಸೇರುತ್ತಾರೆ ಎಂಬ ವದಂತಿಗಳು ಹಬ್ಬಿದ್ದವು.

ಈ ವದಂತಿಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ರಜನಿಕಾಂತ್ ವಿವರಣೆ ನೀಡಿದ್ದು, ತಾವು ಮುಂಬರುವ ಆರ್.ಕೆ. ನಗರ ಉಪಚುನಾವಣೆಯಲ್ಲಿ ಯಾರನ್ನೂ ಬೆಂಬಲಿಸುತ್ತಿಲ್ಲ ಎಂದು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.

(ಎನ್‍.ಬಿ.ಎನ್‍)

Leave a Reply

comments

Related Articles

error: