ಪ್ರಮುಖ ಸುದ್ದಿ

ನೂತನ ಕೆಪಿಸಿಸಿ ಅಧ್ಯಕ್ಷರು ಹಾಗೂ ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭದ ಪೂರ್ವಭಾವಿ ಸಭೆ

ರಾಜ್ಯ(ಚಾಮರಾಜನಗರ)ಜೂ.4:- ಯಳಂದೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ “ನೂತನ ಕೆಪಿಸಿಸಿ ಅಧ್ಯಕ್ಷರು ಹಾಗೂ ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭದ ಪೂರ್ವಭಾವಿ ಸಭೆ” ಯನ್ನು ಯಳಂದೂರು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಆಯೋಜಿಸಲಾಗಿತ್ತು.

ಈ ಸಭೆಯಲ್ಲಿ ಕೆಪಿಸಿಸಿ ವೀಕ್ಷಕರಾದ  ಎಚ್.ಸಿ ಬಸವರಾಜ್, ಮಾಜಿ ಶಾಸಕರಾದ ಶ್ರೀ.ಎಸ್ ಬಾಲರಾಜ್, ಡಿಸಿಸಿ ಪ್ರೆಸಿಡೆಂಟ್ ಪಿ ಮರಿಸ್ವಾಮಿ, ಜಿ.ಪಂ ಸದಸ್ಯರಾದ ಕೆ.ಪಿ ಸದಾಶಿವ ಮೂರ್ತಿ, ಡಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ವಿ ಚಂದ್ರು ಹಾಗೂ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಯೋಜಕರಾದ ಸತೀಶ್ ಕೃಷ್ಣ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ ಅಜ್ಹೀಜ್ ಹಾಗೂ ಮುಖಂಡರಾದ ಬೂದಂಬಳ್ಳಿ ಶಂಕರ್ ಉಪಸ್ಥಿತರಿದ್ದರು. ಆಯಾ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಭಾಗಿಯಾಗಿದ್ದರು.(ಕೆ.ಎಸ್,ಎಸ್.ಎಚ್)

Leave a Reply

comments

Related Articles

error: