ಮೈಸೂರು

ಉಚಿತ ಸಾಮೂಹಿಕ ವಿವಾಹದಲ್ಲಿ ಸಪ್ತಪದಿ ತುಳಿದ ಎಂಟು ಜೋಡಿಗಳು

ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಆರ್ಯ ಈಡಿಗರ ಸಂಘದ ವತಿಯಿಂದ ಆರ್ಯ ಈಡಿಗ ಸಮಾಜದ 8 ಜೋಡಿಯ ಉಚಿತ ಸಾಮೂಹಿಕ ವಿವಾಹ ಗುರುವಾರ ನಡೆಯಿತು.
ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 8 ನವಜೋಡಿಗಳು ಹಸಮಣೆ ಏರುವ ಮೂಲಕ ಸಪ್ತಪದಿ ತುಳಿದರು. ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಆರ್ಯ ಈಡಿಗರ ಸಂಘದ ಅಧ್ಯಕ್ಷ ಎಂ.ಕೆ.ಪೋತರಾಜ್ ಸಾಮೂಹಿಕ ವಿವಾಹಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸರಳ ವಿವಾಹವನ್ನು ಪ್ರೋತ್ಸಾಹಿಸುವ ಸಲುವಾಗಿ ಈ ಸಾಮೂಹಿಕ ವಿವಾಹವನ್ನು ಆಯೋಜಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಅದ್ಧೂರಿ ಮದುವೆಗಳು ಜರುಗುತ್ತಿದ್ದು ಅದರಿಂದ ಹೆಚ್ಚಿನ ಹಣ ವ್ಯಯವಾಗುತ್ತಿದೆ. ಇದರಿಂದ ಹೆಣ್ಣಿನ ಮನೆಯವರು ಸಾಲಗಾರರಾಗುತ್ತಿದ್ದಾರೆ. ದುಂದುವೆಚ್ಚ ಕಡಿಮೆ ಮಾಡಿ ಸರಳವಾಗಿ ವಿವಾಹವಾಗುವುದರಿಂದ ಸಾಲದ ಹೊರೆ ಕಡಿಮೆಯಾಗುವುದಲ್ಲದೆ ಹಣವೂ ಉಳಿತಾಯವಾಗುತ್ತದೆ. ಹಾಗಾಗಿ ಸರಳ ವಿವಾಹವನ್ನು ಪ್ರೋತ್ಸಾಹಿಸುವ ಸಲುವಾಗಿ ಸಾಮೂಹಿಕ ವಿವಾಹ ನಡೆಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಧ್ಯಕ್ಷ ಎಂ.ತಿಮ್ಮೇಗೌಡ, ಮಾಜಿ ಅಧ್ಯಕ್ಷ ಮಾಂಬಳ್ಳಿ ಕೆ.ಪಾಪೇಗೌಡ, ಪಾಲಿಕೆ ಸದಸ್ಯ ಪಿ.ದೇವರಾಜ್, ಎಸ್‍ಎನ್‍ಡಿಪಿ ಅಧ್ಯಕ್ಷ ರಾಜೇಂದ್ರನ್, ಆರ್ಯ ಈಡಿಗರ ಯುವಕ ಸಂಘದ ಅಧ್ಯಕ್ಷ ಎಸ್.ಪಿ.ಸೋಮಶೇಖರ್, ಕದಂಬ ರಾಜಶೇಖರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ಬಿ.ಎಂ-ಎಸ್.ಎಚ್)

Leave a Reply

comments

Related Articles

error: