ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಬ್ಯಾಂಕ್ ಸಿಬ್ಬಂದಿಗೆ ಕೊರೋನಾ : ಬ್ಯಾಂಕ್ ಸೀಲ್ ಡೌನ್

ರಾಜ್ಯ(ಬೆಂಗಳೂರು)ಜೂ.5:- ಬೆಂಗಳೂರಿನಲ್ಲಿ ಬ್ಯಾಂಕ್ ಸಿಬ್ಬಂದಿಯೊಬ್ಬರಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಬ್ಯಾಂಕ್ ಅನ್ನು ಸೀಲ್ ಡೌನ್ ಮಾಡಲಾಗಿದೆ.

ಮಲ್ಲೇಶ್ವರಂನ 8ನೇ ಕ್ರಾಸ್‍ನಲ್ಲಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್‍ ನಲ್ಲಿ ಹೌಸ್ ಕೀಪಿಂಗ್  ಕೆಲಸ ಮಾಡುತ್ತಿದ್ದ ಮಹಿಳೆಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿತ್ತು. ಈ ಹಿನ್ನೆಲೆ ಬ್ಯಾಂಕ್ ಅನ್ನ ಸೀಲ್‍ಡೌನ್ ಮಾಡಲಾಗಿದ್ದು,  ಪರಿಣಾಮ ಸದ್ಯ ಬ್ಯಾಂಕ್ ವಹಿವಾಟು ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ.

ಬ್ಯಾಂಕ್‍ನಲ್ಲಿ ಎಲ್ಲ ಸ್ಥಳಗಳಲ್ಲೂ ಸೋಂಕಿತ ಮಹಿಳಾ ಓಡಾಡಿರುವುದರಿಂದ ಸೋಂಕು ಸಿಬ್ಬಂದಿಗೂ ಹಬ್ಬಿರಬಹುದೆಂಬ ಆತಂಕ ಎದುರಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸೀಲ್‍ಡೌನ್ ಮಾಡಿರುವುದರಿಂದ ಇಲ್ಲಿ ಸಾರ್ವಜನಿಕರು ಮತ್ತು ವಾಹನಗಳ ಓಡಾಡ ಪ್ರವೇಶಕ್ಕೆ ನಿರ್ಬಂಧ  ವಿಧಿಸಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: