ಮೈಸೂರು

ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮೈಸೂರು,ಜೂ.5:- ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಆನಂದ ನಗರದಲ್ಲಿ ನಡೆದಿದೆ.

ಮೃತಳನ್ನು ಭಾವನಾ (24) ಎಂದು ಹೇಳಲಾಗಿದೆ.  ಭಾವನಾ ಒಂದು ತಿಂಗಳ ಹಿಂದೆ ಸಾಫ್ಟ್ ವೇರ್ ಎಂಜಿನಿಯರ್ ಅಜಯ್ ಎಂಬಾತನನ್ನು ವಿವಾಹವಾಗಿದ್ದಳು. ಆದರೆ ಪತಿ ಅಜಯ್‍ ಮತ್ತೊಂದು ಯುವತಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ. ಆ ಫೋಟೋಗಳು ಪತಿ ಅಜಯ್ ಮೊಬೈಲ್‍ನಲ್ಲಿದ್ದು, ಆಕೆಯ ಜೊತೆ ಅಶ್ಲೀಲವಾಗಿ ಇದ್ದಂತಹ ಫೋಟೋವನ್ನು ಭಾವನಾ  ನೋಡಿದ್ದಳು.

ಪತಿಯ ಅಕ್ರಮ ಸಂಬಂಧದ ಬಗ್ಗೆ ಎರಡು ಕುಟುಂಬದವರಿಗೂ ಗೊತ್ತಾಗಿದ್ದು, ನಂತರ ಎಲ್ಲರೂ ಮಾತನಾಡಿ ಮತ್ತೆ ರಾಜೀ ಮಾಡಿಸಿದ್ದರು. ಆದರೂ ಪತಿಯ ಅಕ್ರಮ ಮುಂದುವರಿದಿತ್ತು. ಇದರಿಂದ  ಬೇಸತ್ತು ಭಾವನಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಅಜಯ್ ತಂದೆ ರಾಮಪ್ರಸಾದ್ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: