ಪ್ರಮುಖ ಸುದ್ದಿ

ಮಹಾತ್ಮ ಗಾಂಧಿ ಜಿಲ್ಲಾ ಕೇಂದ್ರ ಗ್ರಂಥಾಲಯ ಉದ್ಘಾಟನೆ

ರಾಜ್ಯ(ಮಡಿಕೇರಿ) ಜೂ.5 :-  ಜಿಲ್ಲಾ ಕೇಂದ್ರ ಮಡಿಕೇರಿಯ ಕೈಗಾರಿಕಾ ಬಡಾವಣೆಯ ಮಹಾತ್ಮ ಗಾಂಧಿ ಜಿಲ್ಲಾ ಕೇಂದ್ರ ಗ್ರಂಥಾಲಯ ಆಧುನೀಕರಣ ಕಟ್ಟಡವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು   ಸಾರ್ವಜನಿಕರಿಗೆ ಸಮರ್ಪಿಸಿದರು.

ಹಾಗೆಯೇ ಜಿಲ್ಲೆಯಲ್ಲಿ ಡಿಜಿಟಲ್ ಸಾರ್ವಜನಿಕ ಗ್ರಂಥಾಲಯಕ್ಕೆ ತಮ್ಮ ಹೆಸರು ನೋಂದಾಯಿಸಿ ಚಾಲನೆ ನೀಡಿದರು. ಸುಮಾರು 87 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿರುವ ಮಹಾತ್ಮಗಾಂಧಿ ಜಿಲ್ಲಾ ಕೇಂದ್ರ ಗ್ರಂಥಾಲಯ ಆಧುನೀಕರಣ ಕಟ್ಟಡ ಉದ್ಘಾಟಿಸಿ ಮಾತನಾಡಿದ ಸಚಿವರು ಗ್ರಂಥಾಲಯದ ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವಂತಾಗಬೇಕು ಎಂದು ವಿ.ಸೋಮಣ್ಣ ಅವರು ಕರೆ ನೀಡಿದರು.

  ವಿಕೋಪ ಎದುರಿಸಲು ಸಿದ್ಧತೆ  

ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಪ್ರಕೃತಿ ವಿಕೋಪ ಎದುರಿಸುವಲ್ಲಿ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಸಚಿವರು ನುಡಿದರು.

ಸಾರ್ವಜನಿಕ ಗ್ರಂಥಾಲಯ ಆವರಣದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿ ಭೌಗೋಳಿಕವಾಗಿ ಮನುಷ್ಯ, ಪ್ರಾಣಿ, ಪಕ್ಷಿ ಸೇರಿದಂತೆ ಜಲಚರವೆಲ್ಲವೂ ವಾಸ ಮಾಡಬೇಕು. ಹಾಗಾದಾಗ ಭೌಗೋಳಿಕವಾಗಿ ಸಮತೋಲನ ಕಾಣಲು ಸಾಧ್ಯ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು.

ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಾದ ಡಾ.ಸತೀಶ್ ಕುಮಾರ್ ಎಸ್.ಹೊಸಮನಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಗ್ರಂಥಾಲಯ ಇಲಾಖೆಯ ಉಪ ನಿರ್ದೇಶಕರಾದ ವೆಂಕಟೇಶ್, ಚಂದ್ರಶೇಖರ್, ಲೀಲಾವತಿ, ಪ್ರಮುಖರಾದ ಪ್ರಕಾಶ್ ಆಚಾರ್ಯ ಇತರರು ಇದ್ದರು.

ಮಡಿಕೇರಿ ನಗರಸಭೆ ಮತ್ತು ಜಿಲ್ಲೆಯ ಮೂರು ಪಟ್ಟಣ ಪಂಚಾಯಿತಿಗಳಲ್ಲಿ ಶೇ.15 ರಷ್ಟು ಆಸ್ತಿ ತೆರಿಗೆ ಹೆಚ್ಚಳ ಮಾಡಿದ್ದು, ಆಸ್ತಿ ತೆರಿಗೆ ಹೆಚ್ಚಳ ಮಾಡಬಾರದು. ಜೊತೆಗೆ ಈ ಹಿಂದಿನಂತೆಯೇ ಇರಬೇಕು.

ಹಾಗೆಯೇ ಜೂನ್, 8 ರಿಂದ ಹೋಂ ಸ್ಟೇಗಳು, ಲಾಡ್ಜ್‍ಗಳು, ಹೋಟೆಲ್‍ಗಳು ಆರಂಭವಾಗಲಿದ್ದು, ಮಾರ್ಗಸೂಚಿ ಪ್ರಕಟಿಸಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಚೇಂಬರ್ ಆಫ್ ಕಾಮರ್ಸ್‍ನ ಮಾಜಿ ಅಧ್ಯಕ್ಷರಾದ ಜಿ.ಚಿದ್ವಿಲಾಸ್, ಪ್ರಧಾನ ಕಾರ್ಯದರ್ಶಿ ಅಂಬೆಕಲ್ ನವೀನ್, ಉಪಾಧ್ಯಕ್ಷರಾದ ನಾಗೇಂದ್ರ ಪ್ರಸಾದ್ ಹಾಗೂ ಪದಾಧಿಕಾರಿಗಳಾದ ಧನಂಜಯ, ಮೋಂತಿ ಗಣೇಶ್, ಹೋಂ ಸ್ಟೇ ಅಸೋಷಿಯೇಷನ್‍ನ ಅನಂತಶಯನ ಅವರು ಮನವಿ ಮಾಡಿದರು. ಪ್ರಮುಖರಾದ ಎಂ.ಬಿ.ದೇವಯ್ಯ ಅವರು ಜಿಲ್ಲೆಯಲ್ಲಿ ಖಾಸಗಿ ಬಸ್‍ಗಳು ಓಡಾಡುತ್ತಿಲ್ಲ. ಆದ್ದರಿಂದ ಖಾಸಗಿ ಬಸ್ ಸಂಚಾರಕ್ಕೆ ಅವಕಾಶ ಮಾಡಬೇಕು. ಇಲ್ಲದಿದ್ದಲ್ಲಿ ಕೆಎಸ್‍ಆರ್‍ಟಿಸಿ ಬಸ್‍ಗಳು ಹೆಚ್ಚು ಓಡಾಟಕ್ಕೆ ಅವಕಾಶ ಮಾಡಬೇಕು ಎಂದು ಅವರು ಮನವಿ ಮಾಡಿದರು.

ಜಿಲ್ಲೆಯಲ್ಲಿ ಪೋಷಕರ ಹೆಸರಿನಲ್ಲಿ ಆರ್‍ಟಿಸಿ ಇದ್ದು, ಮಕ್ಕಳ ಹೆಸರಿಗೆ ಆರ್‍ಟಿಸಿ ಆಗಿರುವುದಿಲ್ಲ. ಆದ್ದರಿಂದ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ತೊಂದರೆಯಾಗುತ್ತಿದೆ. ಈ ಸಮಸ್ಯೆಯನ್ನು ಪರಿಹರಿಸುವಂತಾಗಬೇಕು ಎಂದು ಜಿಲ್ಲೆಯವರು ಕೋರಿದರು.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: