ಪ್ರಮುಖ ಸುದ್ದಿಮೈಸೂರು

ಜೂ. 8 ರಿಂದ ದೇವಾಲಯಗಳ ಪುನರಾರಂಭ: ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ

ಮೈಸೂರು,ಜೂ.6-ಇದೇ ತಿಂಗಳ 8 ರಿಂದ ದೇವಾಲಯಗಳ ಬಾಗಿಲು ತೆರೆಯಲಿದ್ದು, ಭಕ್ತಾಧಿಗಳು ದೇವಾಲಯಕ್ಕೆ ಭೇಟಿ ನೀಡಬಹುದಾಗಿ. ಹೀಗಾಗಿ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ಚಾಮುಂಡಿಬೆಟ್ಟದಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಲಾಗುತ್ತಿದೆ. ಜೊತೆಗೆ ದೇವರ ದರ್ಶನಕ್ಕೆ ಆಗಮಿಸುವ ಭಕ್ತಾಧಿಗಳು ಸಾಮಾಜಿಕ ಅಂತರ ಪಾಲಿಸುವಂತೆ ಮಾರ್ಕ್ ಮಾಡಲಾಗಿದೆ. ಸರ್ಕಾರದ ಮಾರ್ಗಸೂಚಿಯಂತೆ ಸಕಲ ತಯಾರಿಯನ್ನು ಮಾಡಿಕೊಳ್ಳಲಾಗುತ್ತಿದೆ.

ಚಾಮುಂಡಿಬೆಟ್ಟದ ಪ್ರಧಾನ ಅರ್ಚಕ ಡಾ.ಶಶಿಶೇಖರ್ ದೀಕ್ಷಿತ್ ಮಾತನಾಡಿ, ಜೂ.8 ರಿಂದ ಬೆಳಿಗ್ಗೆ 7.30ರಿಂದ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಸರ್ಕಾರದ ಮಾರ್ಗಸೂಚಿಯಂತೆ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ. ಭಕ್ತಾಧಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ದೇವಾಲಯಕ್ಕೆ ಬರಬೇಕು. ಸಾಮಾಜಿಕ ಅಂತರ ಪಾಲಿಸಬೇಕು. ಮೊದಲಿಗೆ 20 ಮಂದಿ ಒಳಗೆ ಹೋಗಿ ದೇವರ ದರ್ಶನ ಪಡೆಯುತ್ತಾರೆ. ಅವರು ಹೊರಗೆ ಬಂದ ಬಳಿಕ ಮತ್ತೆ 20 ಮಂದಿಯನ್ನು ಒಳಗೆ ಬಿಡಲಾಗುತ್ತದೆ ಎಂದು ತಿಳಿಸಿದರು.

ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಗೋವಿಂದ ರಾಜು ಮಾತನಾಡಿ, ದೇವಾಲಯಕ್ಕೆ ಬರುವ ಭಕ್ತಾಧಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಮಾಸ್ಕ್ ಇಲ್ಲದೆ ಇರುವವರಿಗೆ ದೇವಸ್ಥಾನದ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ದೇವಾಲಯದ ಒಳಗೆ ಮತ್ತು ಹೊರಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಅದಕ್ಕಾಗಿ ಮಾರ್ಕ್ ಮಾಡಲಾಗಿದ್ದು, ಮಾರ್ಕ್ ಮಾಡಲಾಗಿರುವ ಬಾಕ್ಸ್ ಗಳಲ್ಲೇ ಭಕ್ತಾಧಿಗಳು ಸರತಿ ಸಾಲಿನಲ್ಲಿ ನಿಂತು ನಿಯಮವನ್ನು ಪಾಲಿಸಬೇಕು. ಥರ್ಮಲ್ ಸ್ಕ್ರೀನಿಂಗ್ ತಪಾಸಣೆ ಮಾಡಲಾಗುವುದು. ಜೊತೆಗೆ ಸ್ಯಾನಿಟೈಸರ್ ನೀಡಲಾಗುವುದು. ದೇವರ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ಉಳಿದ ಸೇವೆಗಳಿರುವುದಿಲ್ಲ. ಜೊತೆಗೆ ಹೂ, ಹಣ್ಣು, ಕಾಯಿ ಮುಂತಾದ ಪೂಜಾ ಸಾಮಗ್ರಿಗಳನ್ನು ತರುವಂತಿಲ್ಲ ಎಂದು ತಿಳಿಸಿದರು.

ಉಸಿರಾಟದ ತೊಂದರೆ, ಜ್ವರ, ಕೆಮ್ಮು, ನೆಗಡಿ ಅಂತಹ ರೋಗ ಲಕ್ಷಣಗಳನ್ನು ಹೊಂದಿರುವವರಿಗೆ ದೇವಾಲಯ ಪ್ರವೇಶವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಸ್ಮಾರ್ಟ್ ಫೋನ್ ಹೊಂದಿರುವವರು ಕಡ್ಡಾಯವಾಗಿ ಆರೋಗ್ಯ ಸೇತು ಆ್ಯಪ್ ಅಳವಡಿಸಿಕೊಳ್ಳಬೇಕು. 65 ವರ್ಷ ಮೇಲ್ಪಟ್ಟವರು, 10 ವರ್ಷ ಕೆಳಗಿನ ಮಕ್ಕಳು ಮತ್ತು ಗರ್ಭಿಣಿಯರಿಗೆ ಪ್ರವೇಶ ನಿಷೇಧಿಸಿದೆ. ದೇವಾಲಯದ ವಸತಿ ಗೃಹದಲ್ಲಿ ತಂಗಲು ಅವಕಾಶವಿರುವುದಿಲ್ಲ. ದಾಸೋಹವಿರುವುದಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು. (ಎಚ್.ಎನ್, ಎಂ.ಎನ್)

Leave a Reply

comments

Related Articles

error: