ಕರ್ನಾಟಕಪ್ರಮುಖ ಸುದ್ದಿ

ಜೂ.8 ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರ ದರ್ಶನಕ್ಕೆ ಅವಕಾಶ: ದರ್ಶನ ನಿಯಮದಲ್ಲಿ ಹಲವು ಮಾರ್ಪಾಡು

ಧರ್ಮಸ್ಥಳ,ಜೂ.6-ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾವು ಜೂ.8 ರಿಂದ ಭಕ್ತರ ದರ್ಶನಕ್ಕೆ ತೆರೆಯಲಿದೆ. ಅದಕ್ಕಾಗಿ ದೇವಲಾಯದಲ್ಲಿ ಸಕಲ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತಿದೆ.

ಕೊರೊನಾ ಹಿನ್ನೆಲೆಯಲ್ಲಿ ದೇವಸ್ಥಾನದ ದರ್ಶನ ನಿಯಮದಲ್ಲಿ ಹಲವು ಮಾರ್ಪಾಡುಗಳನ್ನು ಮಾಡಲಾಗಿದ್ದು, ಕೇಂದ್ರ ಸರಕಾರ ಸೂಚಿಸಿದ ಎಲ್ಲಾ ಮಾರ್ಗದರ್ಶಿಗಳನ್ನು ಪಾಲಿಸಲು ದೇವಸ್ಥಾನ ಆಡಳಿತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಅನಾರೋಗ್ಯ ಇದ್ದವರು ದೇವಸ್ಥಾನಕ್ಕೆ ಭೇಟಿ ನೀಡದಂತೆ ದೇವಸ್ಥಾನದ ಆಡಳಿತ ಮಂಡಳಿ ಭಕ್ತರಲ್ಲಿ ಮನವಿ ಮಾಡಿದ್ದು, ಇಂಥವರು ಬಂದಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸುವುದಿಲ್ಲ ಎನ್ನುವ ಸೂಚನೆಯನ್ನೂ ನೀಡಿದೆ.

ದೇವಸ್ಥಾನಕ್ಕೆ ಬರುವ ಎಲ್ಲಾ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ದೇವಸ್ಥಾನಕ್ಕೆ ಪ್ರವೇಶಿಸುವ ಎಲ್ಲಾ ಭಕ್ತರು ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ಬಳಕೆ ಮಾಡಬೇಕೆಂದು ಸೂಚಿಸಲಾಗಿದೆ. ಜೊತೆಗೆ ದೇವಸ್ಥಾನದ ಅನ್ನಛತ್ರದಲ್ಲೂ ಕೆಲವೊಂದು ಬದಲಾವಣೆಗಳನ್ನು ಮಾಡಲಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡೇ ಅನ್ನ ಸಂತರ್ಪಣೆ ನೆರವೇರಿಸಲೂ ತೀರ್ಮಾನಿಸಲಾಗಿದೆ. (ಎಂ.ಎನ್)

Leave a Reply

comments

Related Articles

error: