ಮೈಸೂರು

ವರ್ಗಾವಣೆ ಹಿನ್ನೆಲೆ ಮುಖ್ಯಪೇದೆ ವಿಷಸೇವಿಸಿ ಆತ್ಮಹತ್ಯೆಗೆ ಯತ್ನ

ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಯಿಂದ ಬೇರೆ ಠಾಣೆಗೆ ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿಯೇ ಮುಖ್ಯಪೇದೆಯೋರ್ವರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮುಖ್ಯಪೇದೆ ವೆಂಕಟೇಶ್ ಗೌಡ ಎಂಬವರೇ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ. ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು ಕುವೆಂಪುನಗರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು. ಇದರಿಂದ ಮನನೊಂದ ಅವರು ಠಾಣೆಯಲ್ಲಿಯೇ ವಿಷ ಸೇವಿಸಿದ್ದಾರೆ. ಮಾಲೊಂದರಲ್ಲಿ ಪರ್ಸ್ ಕದ್ದ ಯುವಕನನ್ನು ಸರಪಳಿಯಿಂದ ಬಂಧಿಸಿ ಕಿರುಕುಳ ನೀಡಿದ ಕುರಿತಾಗಿಯೂ ಮಾತುಗಳು ಕೇಳಿ ಬಂದಿತ್ತು. ಇವರನ್ನು ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಡಿಸಿಪಿ ಶೇಖರ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಅವರ ಕುಟುಂಬಿಕರಲ್ಲಿ ಧೈರ್ಯ ತುಂಬುತ್ತಿದ್ದಾರೆ.

ದೇವರಾಜ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: