ಮೈಸೂರು

ಕೆಂಪನಾಯಕ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುವಂತೆ ಜೆಡಿಎಸ್ ಗೆ ಮನವಿ

ಮೈಸೂರು,ಜೂ.10:- ನಾಯಕ ಸಮುದಾಯದ ಪ್ರಭಾವಿ ಮುಖಂಡರಾದ ಕೆಂಪನಾಯಕ ಅವರನ್ನು ವಿಧಾನಪರಿಷತ್ ಚುನಾವಣೆಯಲ್ಲಿ ವಿಧಾನಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುವಂತೆ ಜೆಡಿಎಸ್ ಮುಖಂಡರಾದ ಹೆಚ್.ಡಿ.ದೇವೇಗೌಡ ಹಾಗೂ ಕುಮಾರಸ್ವಾಮಿಯವರಲ್ಲಿ ನಾಯಕ ಸಮುದಾಯದ ಹೋರಾಟಗಾರರು ಮನವಿ ಮಾಡಿದರು.

ಮೈಸೂರು ಪತ್ರಕರ್ತರ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿನೋದ್ ನಾಯಕ ನಾಗವಾಲ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ನಾಯಕ ಸಮುದಾಯದ ಪ್ರಭಾವಿ ಮುಖಂಡರು ಹಾಗೂ ಮೈಸೂರು ತಾಲೂಕು ನಾಯಕ ಸಂಘದ ಅಧ್ಯಕ್ಷರು ಮತ್ತು ಮಾಜಿ ವಾಲ್ಮೀಕಿ ಪತ್ತಿನ ಸಂಘದ ಅಧ್ಯಕ್ಷರಾಗಿಯೂ ಮೈಸೂರು ಜಿಲ್ಲಾ ಜಾತ್ಯಾತೀತ ಜನತಾದಳದ ಪರಿಶಿಷ್ಟ ಪಂಗಡ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಭಾಗದಲ್ಲಿ ನಾಯಕ ಸಮುದಾಯದ ಸಂಘಟನೆಗೆ ಸಕ್ರೀಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದು ಜನಪರ ಸೇವೆಯಲ್ಲಿ ನಿರತವಾಗಿದ್ದು ಪರಿಚಿತರಾಗಿದ್ದು ಜಿಲ್ಲಾ ಮತ್ತು ನಾಯಕ ಸಂಘಟನೆಗಳೊಡನೆ ಅವಿನಾಭಾವ ಸಂಬಂಧವನ್ನು ಇಟ್ಟುಕೊಂಡು ಜನಪರ ಹೋರಾಟ ಮತ್ತು ಸಮುದಾಯದ ಅಭಿವೃದ್ಧಿಯಲ್ಲಿ ತಮ್ಮನ್ನು ತಾವು ಹತ್ತಾರು ವರ್ಷಗಳಿಂದ ತೊಡಗಿಸಿಕೊಂಡಿರುತ್ತಾರೆ. ಸುಮಾರು 20 ವರ್ಷಗಳಿಂದ ಪಕ್ಷದ ಎಲ್ಲಾ ಮುಖಂಡರ ಜೊತೆ ಒಡನಾಟ ಹೊಂದಿ ಸಂಘಟನೆಯಲ್ಲಿ ತೊಡಗಿರುತ್ತಾರೆ. 2019-20ನೇ ಸಾಲಿನ ಹುಣಸೂರು ವಿಧಾನಸಭಾ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಲು ಪ್ರಬಲ ಆಕಾಂಕ್ಷಿಯಾಗಿದ್ದರು. ಆದ್ದರಿಂದ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗೆ ನಾಯಕ ಸಮುದಾಯದ ಪ್ರಭಾವಿ ಮುಖಂಡರಾದ ಕೆಂಪನಾಯಕ ಅವರನ್ನು ವಿಧಾನಪರಿಷತ್ ಚುನಾವಣೆಯಲ್ಲಿ ವಿಧಾನಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುವಂತೆ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ತಿಮ್ಮನಾಯಕ, ಯೋಗೇಶ್ ಕುಮಾರ್ ಹೊಸ ರಾಮನಹಳ್ಳಿ, ಯೋಗೇಶ್ ಚಿಕ್ಕೇಗೌಡನ ಕೊಪ್ಪಲು ಮತ್ತುಇತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: