ಮೈಸೂರು

ಮಾ.30 ಎಸ್ಸೆಸ್ಸೆಲ್ಸಿ ಪರೀಕ್ಷೆ : ಸಿದ್ಧತಾ ಸಭೆ

ಮಾರ್ಚ್ 30ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭಗೊಳ್ಳಲಿದ್ದು, ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ಮತ್ತು ಸುಗಮವಾಗಿ ನಡೆಸುವಂತೆ ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡಿರುವವರಿಗೆ ಜಿಲ್ಲಾಧಿಕಾರಿ ಡಿ.ರಂದೀಪ್ ಸೂಚನೆ ನೀಡಿದ್ದಾರೆ.

ಮೈಸೂರಿನಲ್ಲಿ ಏರ್ಪಡಿಸಲಾದ ಪೂರ್ವಸಿದ್ಧತಾ ಸಭೆಯಲ್ಲಿ ಪರೀಕ್ಷೆಯ ಮುಖ್ಯಅಧೀಕ್ಷಕಕರು, ಉಪಮುಖ್ಯ ಅಧೀಕ್ಷಕರು, ಪ್ರಶ್ನೆಪತ್ರಿಕೆಯ ಅಭಿರಕ್ಷಕರಿಗೆ ಯಾವುದೇ ರೀತಿಯ ಅಕ್ರಮಗಳಿಗೆ ಅವಕಾಶ ನೀಡದಂತೆ, ವ್ಯವಸ್ಥಿತವಾಗಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಪರೀಕ್ಷಾ ನಿಯಮದ ಕುರಿತು ಮಾಹಿತಿ ನೀಡಲಾಯಿತು. ಜಿಲ್ಲೆಯಲ್ಲಿ ಒಟ್ಟು 134 ಪರೀಕ್ಷಾ ಕೇಂದ್ರಗಳಿದ್ದು, ಪರೀಕ್ಷೆಯ ನಿಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.  (ಎಸ್.ಎಚ್)

Leave a Reply

comments

Related Articles

error: