ಮೈಸೂರು

ಮಾ.28: ವಿಚಾರ ಸಂಕಿರಣ

ಲರ್ನರ್ ಸ್ಮಾರ್ಟ್ ಐಕ್ಯೂ ಡಿಜಿಟಲ್ ಕಲಿಕಾ ವೇದಿಕೆ ಸಮರ್ಪಣಾ ಸಮಾರಂಭ ಹಾಗೂ ಸಿಇಟಿ ಮತ್ತು ನೀಟ್ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಲು ಪ್ರೌಢಶಾಲಾ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಉಚಿತ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸ್ಮಾರ್ಟ್ ಐಕ್ಯೂ ಸಂಸ್ಥೆಯ ಪ್ರಕಾಶ್ ತಿಳಿಸಿದರು.

ಮೈಸೂರು ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕಾರ್ಯಾಗಾರವನ್ನು ಮಾರ್ಚ್ 28 ರಂದು ಕಲಾಮಂದಿರದಲ್ಲಿ ಏರ್ಪಡಿಸಲಾಗಿದ್ದು, ಸಿಇಟಿ ಮತ್ತು ನೀಟ್ ಪರೀಕ್ಷೆಗಳನ್ನು ಎದುರಿಸಲು ವಿದ್ಯಾರ್ಥಿಗಳು  ಕಷ್ಟ ಪಡುತ್ತಿದ್ದಾರೆ.ಈ ದೆಸೆಯಲ್ಲಿ ವಿದ್ಯಾರ್ಥಿಗಳಿಗೆ ನೆರವು ನೀಡುವ ಸಲುವಾಗಿ ಆನ್ ಲೈನ್ / ನೀಟ್ ಕ್ರಾಫ್ ಕೋರ್ಸ್ ಸೌಲಭ್ಯವನ್ನು ಸಮರ್ಪಿಸಲಾಗುತ್ತಿದೆ. ವಿದ್ಯಾರ್ಥಿಗಳು ಈ ಕಾರ್ಯಾಗಾರವನ್ನು ಸದುಪಯೋಗಿಸಿಕೊಳ್ಳಿ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥಾಪಕರಾದ ಮುರಳಿ, ನಿಶಾಂತ್, ನಾಗರಾಜು ಉಪಸ್ಥಿತರಿದ್ದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: