ಕರ್ನಾಟಕಪ್ರಮುಖ ಸುದ್ದಿ

ಪಾಕ್ ಪರ ಘೋಷಣೆ ಕೂಗಿದ್ದ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು

ಹುಬ್ಬಳ್ಳಿ,ಜೂ.12-ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳಿಗೆ ನಗರದ ಜೆಎಂಎಫ್‌ಸಿ 2ನೇ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

ನಗರದ ಎಂಜಿನಿಯರಿಂಗ್‌ ಕಾಲೇಜೊಂದರಲ್ಲಿ ಓದುತ್ತಿದ್ದ ಕಾಶ್ಮೀರ ಮೂಲದ ತಾಲಿಬ್‌ ಮಾಜಿದ್‌, ಆರ್ಮಿ ವಾನಿ ಮತ್ತು ಬಾಷಿತ್‌ ಸೋಫಿ ಅವರಿಗೆ ಜಾಮೀನು ಮಂಜೂರಾಗಿದೆ.

ವಿಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆ ನಡೆಸಿದ ಜೆಎಂಎಫ್‌ಸಿ 2ನೇ ನ್ಯಾಯಾಲಯದ ನ್ಯಾಯಾಧೀಶರು ಆ ಮೂವರು ವಿದ್ಯಾರ್ಥಿಗಳಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಮೂವರು ತಲಾ 1 ಲಕ್ಷ ರೂ. ಬಾಂಡ್‌ ನೀಡಬೇಕು. ಸಾಕ್ಷ್ಯಗಳನ್ನು ನಾಶಪಡಿಸಲು ಪ್ರಯತ್ನಿಸಬಾರದು. ಹುಬ್ಬಳ್ಳಿ ಬಿಟ್ಟು ಬೇರೆಡೆ ಪ್ರಯಾಣಿಸಬಾರದು. ವಿಚಾರಣೆ ಸರಿಯಾಗಿ ಹಾಜರಾಗಬೇಕು ಸೇರಿದಂತೆ ಮತ್ತಿತರರ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ ಎಂದು ಮೂಲಗಳು ತಿಳಿಸಿವೆ.

ಕಾಲೇಜಿನ ಹಾಸ್ಟೆಲ್‌ನಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಆ ವಿಡಿಯೋ ವೈರಲ್‌ ಆಗಿದ್ದರಿಂದ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿ ದೇಶದ್ರೋಹದ ಪ್ರಕರಣ ದಾಖಲಿಸಿದ್ದರು. (ಎಂ.ಎನ್)

 

Leave a Reply

comments

Related Articles

error: