ದೇಶ

ಪಶ್ಚಿಮ ಬಂಗಾಳ: ಮೂರು ಅಂತಸ್ತಿನ ವಸತಿ ಕಟ್ಟಡ ಕುಸಿತ

ಕೋಲ್ಕತ್ತಾ,ಜೂ.15- ಮೂರು ಅಂತಸ್ತಿನ ವಸತಿ ಕಟ್ಟಡವೊಂದು ಕುಸಿದು ಬಿದ್ದಿರುವ ಘಟನೆ ಪಶ್ಚಿಮ ಬಂಗಾಳದ ಮಿಡ್ನಾಪೊರ್ ಜಿಲ್ಲೆಯಲ್ಲಿ ನಡೆದಿದೆ.

ಕಾಲುವೆಯೊಂದರ ಸಮೀಪದಲ್ಲಿದ್ದ ಮೂರು ಅಂತಸ್ತಿನ ವಸತಿ ಕಟ್ಟಡ ಕುಸಿದು ಬಿದ್ದಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಟ್ಟಡ ಕುಸಿದು ಬೀಳುತ್ತಿರುವ ವಿಡಿಯೋ ವೈರಲ್ ಆಗಿದೆ.

ಕಟ್ಟಡ ನಿವಾಸಿಗಳು ಮನೆ ಖಾಲಿ ಮಾಡಿದ್ದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮನೆಯಲ್ಲಿದ್ದ ಸಾಮಾಗ್ರಿಗಳು ನಷ್ಟಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಕೆಲವು ವಾರಗಳಿಂದ ಜಿಲ್ಲಿಯ ದಾಸ್‌ಪುರ ಬ್ಲಾಕ್‌ನ ಗೊಮ್ರೈ ಕಾಲುವೆಯಲ್ಲಿ ಹೂಳೆತ್ತುವ ಕಾಮಗಾರಿ ನಡೆಯುತ್ತಿದ್ದು. ಅದರ ಅಂಚಿನಲ್ಲಿದ್ದ ಕಟ್ಟಡದ ಅಡಿಪಾಯಕ್ಕೆ ಹಾನಿಯಾದ ಪರಿಣಾಮ ಕುಸಿತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. (ಎಂ.ಎನ್)

Leave a Reply

comments

Related Articles

error: