ಪ್ರಮುಖ ಸುದ್ದಿಮೈಸೂರು

ಸಕ್ಕರೆ ಕಾರ್ಖಾನೆಯ ಸಮಯೋಚಿತ ಆರಂಭದ ಅಗತ್ಯವಿದೆ : ರಾಜವಂಶಸ್ಥ ಯದುವೀರ್

 ಮೈಸೂರು,ಜೂ.17:- ಮಂಡ್ಯ ಜಿಲ್ಲೆಯ ರೈತರು ಬೆಳೆದಿರುವ ಕಬ್ಬನ್ನು ಮಾರಾಟ ಮಾಡಲು ಸಕ್ಕರೆ ಕಾರ್ಖಾನೆಯ ಸಮಯೋಚಿತ ಆರಂಭದ ಅಗತ್ಯವಿದೆ. ಕಾರ್ಯಾಚರಣೆ ಮತ್ತು ನಿರ್ವಹಣೆ ವ್ಯವಸ್ಥೆ (ಒ&ಎಂ)ಯಡಿ ಆರಂಭಿಸಿ ಎಂದು ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದ್ದಾರೆ.

ಈ ಕುರಿತು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿರುವ ಅವರು ಮೈಶುಗರ್ ಕಾರ್ಖಾನೆಯ ಪರಂಪರೆಯ ದೃಷ್ಟಿಯಿಂದ ಖಾಸಗೀಕರಣಕ್ಕೆ ಪ್ರತಿರೋಧ ವ್ಯಕ್ತವಾಗುತ್ತಿರುವುದು ಅರ್ಥವಾಗುವಂಥದ್ದು. ಕಾರ್ಖಾನೆ ನಡೆಸುವಲ್ಲಿ ಸರ್ಕಾರದ ವೈಫಲ್ಯ ಮತ್ತು ಸಂಪೂರ್ಣ ಖಾಸಗೀಕರಣದ ವಿರುದ್ಧ ಸಾರ್ವಜನಿಕರ ಭಾವನೆಗಳ ನಡುವೆ ಇರುವ ಒಂದು ಆಯ್ಕೆ ಎಂದರೆ ಒ ಆ್ಯಂಡ್ ಎಂ ವ್ಯವಸ್ಥೆಯಡಿ ನಡೆಸುವುದು. ಈ ವ್ಯವಸ್ಥೆಯು ಸಾರ್ವಜನಿಕರಿಗೆ ಸಮಾಧಾನ ಉಂಟು ಮಾಡುವುದರ ಜೊತೆಗೆ ಕಾರ್ಖಾನೆಯು ಮತ್ತೊಮ್ಮೆ ಸಮೃದ್ಧಿಯಾಗಿ ಕಾರ್ಯ ನಿರ್ವಹಣೆ ಮಾಡುವಂತೆ ನೋಡಿಕೊಳ್ಳಬಹುದು. ಕಬ್ಬು ಬೆಳೆಗಾರರಿಗೆ ಯಾವುದೇ ಸಂಕಷ್ಟ ಎದುರಾಗುವುದಿಲ್ಲ ಎಂದಿದ್ದಾರೆ.

ರಾಜವಂಶಸ್ಥ ಯದುವೀರ್ ನೀಡಿರುವ ಈ ಹೇಳಿಕೆಯನ್ನು ನಿರಾಣಿ ಸಕ್ಕರೆ ಕಾರ್ಖಾನೆ ಸಮೂಹದ ಅಧ್ಯಕ್ಷ ಮುರುಗೇಶ್ ನಿರಾಣಿ ಸ್ವಾಗತಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: