ಮೈಸೂರು

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ : ಬಿ.ಎಸ್.ಯಡಿಯೂರಪ್ಪ ವಿಶ್ವಾಸ

ಇಡೀ ಸಂಪುಟವೇ ಪ್ರಚಾರಕ್ಕೆ ಬಂದರೂ ಬಿಜೆಪಿಗೆ ಎದುರಿಸುವ ಶಕ್ತಿ ಇದೆ. ಕನಿಷ್ಠ 25 ಸಾವಿರ ಮತಗಳ ಅಂತರದಲ್ಲಿ ಎರಡು ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಅಧಿಕಾರ ದುರುಪಯೋಗ ಮಾಡಿಕೊಂಡು ಉಪಚುನಾವಣೆಯನ್ನು ಎದುರಿಸುತ್ತಿದೆ. ಅದರ ಪರಿಣಾಮವಾಗಿ ಒಬ್ಬ ಪಿಎಸ್ಐ ವರ್ಗಾವಣೆ ಆಗಿದೆ. ಈ ಬಗ್ಗೆ ಕೇಂದ್ರ ಗೃಹಸಚಿವರಿಗೂ ಮಾಹಿತಿ ನೀಡಿದ್ದೇವೆ. ಅವರು ಅಕ್ರಮ ನಡೆಯಲು ಬಿಡುವುದಿಲ್ಲ ಅಂತ ಭರವಸೆ ನೀಡಿದ್ದಾರೆ.
ಹೀಗಾಗಿ ಕಾಂಗ್ರೆಸ್‌ನವರು ಏನು ಮಾಡುತ್ತಾರೆ ಎಂದು ಕಾದುನೋಡೋಣ.  ಅವರೇನೆ ಮಾಡಿದರೂ ಉಪಚುನಾವಣೆಯಲ್ಲಿ  ಬಿಜೆಪಿ ಗೆಲುವು ನಿಶ್ಚಿತ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: