ಪ್ರಮುಖ ಸುದ್ದಿ

  ಭಾರತ-ಚೀನಾ ಉದ್ವಿಗ್ನತೆ ಕುರಿತು ಚರ್ಚಿಸಲು ಜೂ.19ರಂದು ಸರ್ವ ಪಕ್ಷ ಸಭೆ ಕರೆದ ಪ್ರಧಾನಿ ನರೇಂದ್ರ ಮೋದಿ  

ದೇಶ(ನವದೆಹಲಿ)ಜೂ.17:-  ಭಾರತ-ಚೀನಾ ಉದ್ವಿಗ್ನತೆ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 19 ರಂದು ಸಂಜೆ 5 ಗಂಟೆಗೆ ಸರ್ವಪಕ್ಷ ಸಭೆ ಕರೆದಿದ್ದಾರೆ. ಈ ಸಭೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಯಲಿದೆ. ಈ ಪರಿಸ್ಥಿತಿಯ ಕುರಿತು ಪ್ರಧಾನಿ ಪಕ್ಷದ ಎಲ್ಲ ಪ್ರತಿನಿಧಿಗಳೊಂದಿಗೆ ಚರ್ಚಿಸಲಿದ್ದಾರೆ. ಈ   ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ.

ಮಿಲಿಟರಿ ಮಟ್ಟದಲ್ಲಿ ಮಾತುಕತೆ  ನಿಲ್ಲಿಸಲಾಗಿದೆ  ಸೈನಿಕರಿಗೆ   ಎಚ್ಚರಿಕೆಗಳನ್ನು ನೀಡಲಾಗಿದೆ. 3500 ಕಿ.ಮೀ ಗಡಿಯಲ್ಲಿ ಚೀನಾದ ಆಕ್ರಮಣಕಾರಿ ಮನೋಭಾವವನ್ನು ಎದುರಿಸಲು ದೃಢ  ನಿಲುವನ್ನು ಮುಂದುವರಿಸಲು ಭಾರತ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಪೂರ್ವ ಲಡಾಕ್‌ನಲ್ಲಿ ಸೋಮವಾರ ರಾತ್ರಿ ಗಾಲ್ವಾನ್ ಕಣಿವೆಯಲ್ಲಿ ಚೀನಾದ ಸೈನಿಕರೊಂದಿಗೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ಭಾರತೀಯ ಸೇನೆಯ ಕರ್ನಲ್ ಸೇರಿದಂತೆ 20 ಯೋಧರು ಸಾವನ್ನಪ್ಪಿದ್ದಾರೆ.

ಐದು ದಶಕಗಳಿಗಿಂತಲೂ ಹೆಚ್ಚಿನ ಅವಧಿಯಲ್ಲಿ ನಡೆದ ಅತಿದೊಡ್ಡ ಮಿಲಿಟರಿ ಮುಖಾಮುಖಿಯಿಂದಾಗಿ, ಈ ಪ್ರದೇಶದ ಗಡಿಯಲ್ಲಿ   ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಚೀನಾದ   43 ಸೈನಿಕರು ಸಹ ಸಾವನ್ನಪ್ಪಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸಂಜೆ ಉನ್ನತ ಮಟ್ಟದ ಸಭೆ ನಡೆಸಿದ್ದು, ಈ ಸಭೆಯಲ್ಲಿ ಪೂರ್ವ ಲಡಾಖ್‌ನ ಪರಿಸ್ಥಿತಿಯ ಒಟ್ಟಾರೆ ಪರಿಶೀಲನೆ ನಡೆಸಲಾಗಿದೆ. 3500 ಕಿ.ಮೀ ಗಡಿಯಲ್ಲಿ ಚೀನಾದ ಆಕ್ರಮಣಕಾರಿ ಮನೋಭಾವವನ್ನು ಎದುರಿಸಲು ದೃಢ ನಿಲುವನ್ನು ಮುಂದುವರಿಸಲು ಭಾರತ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಪೂರ್ವ ಲಡಾಖ್‌ನಲ್ಲಿ ಚೀನಾದ ವಾಯುಪಡೆಯ ತಮ್ಮ ಕಾರ್ಯ ಚಟುವಟಿಕೆ ನಡೆಸಿರುವುದು ಕಂಡುಬಂದಿವೆ ಎಂದು ಮಿಲಿಟರಿ ಮೂಲಗಳು ತಿಳಿಸಿವೆ. ಚಕಮಕಿಯ ಜಾಗದಲ್ಲಿ ಉಭಯ ದೇಶಗಳ ಸೇನೆಗಳು   ಮಾತುಕತೆ ನಡೆಸಿವೆ. ಪೂರ್ವ ಲಡಾಖ್‌ನಲ್ಲಿ ಭಾರತೀಯ ಮತ್ತು ಚೀನಾದ ಸೇನೆಗಳ ನಡುವೆ ಹಿಂಸಾತ್ಮಕ ಘರ್ಷಣೆ ಉಂಟಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ನಾವು ರಾಜತಾಂತ್ರಿಕ ಮತ್ತು ಮಿಲಿಟರಿ ಮಾರ್ಗಗಳ ಮೂಲಕ ಸಂವಹನ ನಡೆಸುತ್ತಿದ್ದೇವೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ  ಝಾವೋ ಲಿಜಿಯಾನ್ ಹೇಳಿದ್ದಾರೆ. ಈ ಘಟನೆಯಲ್ಲಿ ಸರಿ ಮತ್ತು ತಪ್ಪು ಬಹಳ ಸ್ಪಷ್ಟವಾಗಿದೆ, ಈ ಘಟನೆಯು ವಾಸ್ತವಿಕ ನಿಯಂತ್ರಣ ರೇಖೆಯ ಬದಿಯಲ್ಲಿ ಸಂಭವಿಸಿದೆ ಮತ್ತು ಇದಕ್ಕೆ ಚೀನಾವನ್ನು ದೂಷಿಸಬಾರದು. ಚೀನಾದ ಕಡೆಯಿಂದ ಯಾವುದೇ ಘರ್ಷಣೆಯನ್ನು ನೋಡಲು ನಾವು ಬಯಸುವುದಿಲ್ಲ ಎಂದಿದ್ದಾರೆ ಎನ್ನಲಾಗಿದೆ.

ರಾಜತಾಂತ್ರಿಕ ಮತ್ತು ಮಿಲಿಟರಿ ಮಟ್ಟದ ಮಾತುಕತೆಗಳ ಮೂಲಕ ವಿವಾದವನ್ನು ಬಗೆಹರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಚೀನಾ ವಿದೇಶಾಂಗ ಸಚಿವಾಲಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದೆ. ಚೀನಾದ ಕ್ರಮದಿಂದ ಇಡೀ ದೇಶದಲ್ಲಿ ಕೋಪದ ವಾತಾವರಣವಿದೆ. ಸೈನಿಕರ ಶೌರ್ಯ ಮತ್ತು ತ್ಯಾಗವನ್ನು ರಾಷ್ಟ್ರ ಎಂದಿಗೂ ಮರೆಯುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಪ್ರಾಣ ಕಳೆದುಕೊಂಡ ಸೈನಿಕರ ಕುಟುಂಬಕ್ಕೆ  ನನ್ನ ಸಂತಾಪ. ಈ ಕಷ್ಟದ ಸಮಯದಲ್ಲಿ ರಾಷ್ಟ್ರವು ಅವರೊಂದಿಗೆ ಹೆಗಲಿಗೆ ಹೆಗಲುಕೊಟ್ಟು ನಿಲ್ಲಲಿದೆ. ಭಾರತದ ಸೈನಿಕರ ಧೈರ್ಯ ಮತ್ತು ದೇಶಪ್ರೇಮದ ಬಗ್ಗೆ ನಮಗೆ ಹೆಮ್ಮೆ ಇದೆ ಎಂದಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: