ಕರ್ನಾಟಕಪ್ರಮುಖ ಸುದ್ದಿ

ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಕೊರೊನಾ ಸೋಂಕು ದೃಢ

ಬೆಂಗಳೂರು,ಜೂ.19-ನಿನ್ನೆಯಷ್ಟೇ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಇಂದು ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದೆ. ಇದರಿಂದ ಆಕೆಯೊಂದಿಗೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಲ್ಲಿ ಆತಂಕ ಶುರುವಾಗಿದೆ.

ಕೊರೊನಾ ಪಾಸಿಟಿವ್ ಬಂದಿರುವ ವಿದ್ಯಾರ್ಥಿನಿ ಬೆಂಗಳೂರಿನ ಜಯನಗರದ ನಾಲ್ಕನೇ ಬ್ಲಾಕ್ ನ ಪರೀಕ್ಷಾ ಕೇಂದ್ರಕ್ಕೆ ಬಂದು ಪರೀಕ್ಷೆ ಬರೆದಿದ್ದರು.

ವಿದ್ಯಾರ್ಥಿನಿ ಪರೀಕ್ಷೆ ಬರೆದ ಕೋಣೆಯಲ್ಲಿ ಸುಮಾರು 14 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈಗ ಆ ವಿದ್ಯಾರ್ಥಿಗಳನ್ನು ಪತ್ತೆ ಮಾಡುವ ಕಾರ್ಯದಲ್ಲಿ ಅಧಿಕಾರಿಗಳು ತೊಡಗಿದ್ದಾರೆ.

ವಿದ್ಯಾರ್ಥಿನಿ ಅದಾಗಲೇ ಹೋಂ ಕ್ವಾರಂಟೈನ್ನಲ್ಲಿದ್ದರುಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾರಣ ಕೈಗೆ ಸೀಲ್ ಹಾಕಿ ಕ್ವಾರಂಟೈನ್ಗೆ ಒಳಪಡಿಸಲಾಗಿತ್ತು. ಆದರೆ, ತನ್ನ ಕೈಗೆ ಹಾಕಿದ್ದ ಸೀಲ್ ಅನ್ನು ಅಳಿಸಿಕೊಂಡು ಅಧಿಕಾರಿಗಳ ಕಣ್ತಪ್ಪಿಸಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ಪರೀಕ್ಷೆ ಬರೆದು ಹೋಗಿದ್ದಾರೆ.

ಆಕೆಯ ಮಾದರಿ ಸಹ ಮೊದಲೇ ಸಂಗ್ರಹವಾಗಿತ್ತು. ಇಂದು ಆಕೆಯ ವರದಿ ಬಂದಿದ್ದು, ಸೋಂಕು ತಗುಲಿರುವುದು ದೃಢವಾಗಿದೆ. (ಎಂ.ಎನ್)

 

Leave a Reply

comments

Related Articles

error: