ದೇಶಪ್ರಮುಖ ಸುದ್ದಿ

ಹುತಾತ್ಮ ಕರ್ನಲ್ ಸಂತೋಷ್ ಬಾಬು ಕುಟುಂಬಕ್ಕೆ 5 ಕೋಟಿ ರೂ. ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

ಹೈದರಾಬಾದ್,ಜೂ.20-ಪೂರ್ವ ಲಡಾಖ್ ನ ಗಲ್ವಾನ್ ಕಣಿವೆಯಲ್ಲಿ ಭಾರತ-ಚೀನಾ ಸೈನಿಕರ ನಡುವೆ ನಡೆದ ಸಂಘರ್ಷದಲ್ಲಿ ಹುತಾತ್ಮರಾದ ಕರ್ನಲ್ ಸಂತೋಷ್ ಬಾಬು ಕುಟುಂಬಕ್ಕೆ 5 ಕೋಟಿ ರೂ. ಪರಿಹಾರವನ್ನು ತೆಲಂಗಾಣ ಸರ್ಕಾರ ಘೋಷಿಸಿದೆ.

ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಮಾತನಾಡಿ, ಹುತಾತ್ಮ ಯೋಧ ಸಂತೋಷ್ ಬಾಬು ಕುಟುಂಬಕ್ಕೆ 5 ಕೋಟಿ ರೂ. ಪರಿಹಾರ ನೀಡಲಾಗುತ್ತಿದ್ದು, ಉಳಿದ ಯೋಧರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಪರಿಹಾರದ ಜೊತೆಗೆ ಸಂತೋಷ್ ಬಾಬು ಅವರ ಕುಟುಂಬಕ್ಕೆ ನಿವಾಸ ಹಾಗೂ ಸಂತೋಷ್ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದು, ಹುತಾತ್ಮ ಯೋಧನ ಮನೆಗೆ ಸ್ವತಃ ತೆರಳಿ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.

ಗಡಿಯಲ್ಲಿ ನಮ್ಮ ದೇಶವನ್ನು ಕಾಯುತ್ತಿರುವ ಯೋಧರೊಂದಿಗೆ ಇಡೀ ದೇಶ ನಿಲ್ಲಲಿದೆ. ಹುತಾತ್ಮ ಯೋಧರ ಕುಟುಂಬಸ್ಥರೊಂದಿಗೆ ನಾವು ನಿಲ್ಲಬೇಕು. ಅವರಿಗೆ ಬೆಂಬಲ ನೀಡಬೇಕು. ಇಡೀ ದೇಶ ನಿಮ್ಮೊಂದಿಗೆ ಎಂಬ ಧೈರ್ಯವನ್ನು ನಾವು ನೀಡಬೇಕು ಎಂದಿದ್ದಾರೆ. (ಎಂ.ಎನ್)

Leave a Reply

comments

Related Articles

error: