ಮೈಸೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹಣ ನೀಡದೇ ಸುಳ್ಳು ಆಶ್ವಾಸನೆ ನೀಡುತ್ತಿದ್ದಾರೆ : ಪುಟ್ಟಸ್ವಾಮಿ ಆರೋಪ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹಣ  ನೀಡದೇ ಬರೀ ಸುಳ್ಳು ಆಶ್ವಾಸನೆ ನೀಡುತ್ತಿದ್ದಾರೆ ಎಂದು ಒಬಿಸಿ ರಾಜ್ಯಧ್ಯಾಕ್ಷ ಪುಟ್ಟಸ್ವಾಮಿ ಆರೋಪಿಸಿದರು.

ಮೈಸೂರಿನ  ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಂಜನಗೂಡು ಹಾಗೂ ಗುಂಡ್ಲುಪೇಟೆಯಲ್ಲಿ  ಉಪಚುನಾವಣೆ ನಡೆಯುತ್ತಿದೆ. ಪ್ರತಿಷ್ಠೆಯ ಕಣವಾಗಿರುವ ನಂಜನಗೂಡು ಉಪಚುನಾವಣೆ ಮಹತ್ವ ಪಡೆದುಕೊಂಡಿದ್ದು,  ರಾಜ್ಯದ ಗಮನ ಸೆಳೆಯುತ್ತಿದೆ.  ಮುಖ್ಯಮಂತ್ರಿ ಸಿದ್ದರಾಮಯ್ಯ 2017-18 ಸಾಲಿನ ಬಜೆಟ್ ಮಂಡಿಸಿದ್ದಾರೆ.  ಮುಖ್ಯಮಂತ್ರಿಗಳು ತಮ್ಮ 4 ವರ್ಷದ ಆಡಳಿತದ ಅವಧಿಯಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಹೇಳಿಕೊಳ್ಳುತ್ತಿರುತ್ತಾರೆ. ಆದರೆ ಕರ್ನಾಟಕ ರಾಜ್ಯಕ್ಕೆ ಅಭಿವೃದ್ಧಿ ಹೆಸರಿನಲ್ಲಿ ಸಾಲ ಭಾಗ್ಯ ನೀಡಿ ಎಲ್ಲರನ್ನೂ ಸಾಲದ ಕೂಪಕ್ಕೆ ತಳ್ಳಿದ್ದಾರೆ.  ಕೆಲವೂಂದು ಯೋಜನೆಗೆ ಹಣವನ್ನೇ ನೀಡಿಲ್ಲ ಎಂದು ಆರೋಪಿಸಿದರು.

ಕೆಲವು ಅಭಿವೃದ್ಧಿಗೆ ಅಂತ ಕೋಟ್ಯಾಂತರ ಹಣವನ್ನು ಜಾರಿಗೊಳಿಸಿದರು. ಜಾರಿಗೊಳಿಸಿದ ಕೋಟ್ಯಾಂತರ ರೂಪಾಯಿಗಳು ಏನಾಯಿತು.  ಪಸ್ತುತ  ದಿನಗಳಲ್ಲಿ ಶಾಸಕರ  ಮನೆಗಳಿಗೆ ದಾಳಿ ಮಾಡಿದರೇ ಕೋಟಿ ಕೋಟಿ ಹಣ ಸಿಗತೊಡಗಿದೆ. ಅಷ್ಟೊಂದು ಹಣ ಇವರಿಗೆ ಹೇಗೆ ಬಂತು ಎಂದು ಪ್ರಶ್ನಿಸಿದರು.

ಇವರ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಹೂಡಿಕೆ ಹಾಗೂ ಎಲ್ಲಾ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುತ್ತಿದೆ. ಹಿಂದುಳಿದ ವರ್ಗದವರ ಮಕ್ಕಳಿಗೆ ಹಾಸ್ಟೆಲ್ ನಿರ್ಮಾಣಕ್ಕೆ ಯಡಿಯೂರಪ್ಪನವರು 100 ಕೋಟಿ ಹಣ ನೀಡಿದ್ದರು. ಆದರೆ ಸಿದ್ದರಾಮಯ್ಯನವರ ಕಾಲದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ. ನಾವು ಹಾಸ್ಟೆಲ್ ಗಳಿಗೆ ಭೇಟಿ ನೀಡಿದಾಗ 850 ಹಾಸ್ಟೆಲ್ ಗಳಿಗೆ ಮಂಚ, ಹಾಸಿಗೆ ಇರಲಿಲ್ಲ, 540 ಹಾಸ್ಟೆಲ್ ಗಳಲ್ಲಿ ಶೌಚಾಲಯ ಇಲ್ಲ, 270 ಹಾಸ್ಟೆಲ್ ಗಳಲ್ಲಿ ಸ್ನಾನದ ಮನೆ ಇಲ್ಲ.ಇನ್ನೂ ಅನೇಕ ಸಮಸ್ಯೆಗಳು ಎದ್ದು ಕಾಣುತ್ತಿವೆ. ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹಣ  ನೀಡದೇ ಬರೀ ಸುಳ್ಳು ಆಶ್ವಾಸನೆ ನೀಡುತ್ತಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ  ಮಂಜುನಾಥ್, ತಿಪ್ಪೇಸ್ವಾಮಿ, ಪರಶುರಾಮ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: