ಮೈಸೂರು

ಸೆ.29ರಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ

ಭಾರತೀಯ ಜನತಾ ಪಕ್ಷದ ಕೃಷ್ಣರಾಜ ಕ್ಷೇತ್ರದ ಹಿಂದುಳಿದ ವರ್ಗಗಳ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣವನ್ನು ಸೆ.29ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರಿನ ಆರಾಧ್ಯ ಮಹಾಸಭಾದಲ್ಲಿ ಆಯೋಜಿಸಲಾಗಿದೆ ಇದೇ ಸಂರ್ಭದಲ್ಲಿ ಪಕ್ಷದ ಕಾರ್ಯವೈಖರಿಯನ್ನು ಮೆಚ್ಚಿ ಸುಮಾರು 50ಕ್ಕೂ ಹೆಚ್ಚು ಹಿಂದುಳಿದ ವರ್ಗಗಳ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರಿಲಿದ್ದಾರೆ ಎಂದು ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಯೋಗಾನಂದ್ ತಿಳಿಸಿದರು.

ಅವರು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಮಾರಂಭದ ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ಬೇಲೂರು ಲಕ್ಷ್ಮಣ್ ಉದ್ಘಾಟಿಸುವರು. ಎನ್.ಯೋಗಾನಂದ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಸ್.ಎ.ರಾಮದಾಸ್, ನಗರಾಧ್ಯಕ್ಷ ಡಾ.ಮಂಜುನಾಥ್, ಹಿಂದುಳಿದ ವರ್ಗಗಳ ನಗರಾಧ್ಯಕ್ಷ ಬಿ.ಕೆ.ಮಂಜುನಾಥ್, ಉಪ ಮಹಾಪೌರೆ ವನಿತಾ ಪ್ರಸನ್ನ ಹಾಜರಿರುವರು ಎಂದು ತಿಳಿಸಿದರು.

ಸುದ್ಧಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಸಂತೋಷ್, ನಗರಪಾಲಿಕೆ ಸದಸ್ಯ ಬಿ.ವಿ.ಮಂಜುನಾಥ್, ಪ್ರಧಾನ ಕಾರ್ಯದರ್ಶಿಗಳಾದ ವಿ.ಎನ್.ಕೃಷ್ಣ, ವಿದ್ಯಾ ಅರಸ್ ಹಾಗೂ ಜೋಗಿ ಮಂಜು ಉಪಸ್ಥಿತರಿದ್ದರು.

Leave a Reply

comments

Tags

Related Articles

error: