ಕರ್ನಾಟಕಪ್ರಮುಖ ಸುದ್ದಿ

ಸಚಿವ ಸುಧಾಕರ್ ಮನೆಯಲ್ಲಿ ಕೊರೊನಾ ಆತಂಕ: ಜ್ವರ, ಕೆಮ್ಮಿನಿಂದ ತಂದೆ ಆಸ್ಪತ್ರೆಗೆ ದಾಖಲು

ಬೆಂಗಳೂರು,ಜೂ.22-ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಮನೆಗೆ ಕೊರೊನಾ ವೈರಸ್ ಆತಂಕ ಆವರಿಸಿದೆ.

ಸುಧಾಕರ್ ಅವರ ತಂದೆಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಸುಧಾಕರ್ ತಂದೆಗೆ ಜ್ವರ ಹಾಗೂ ಕೆಮ್ಮಿನ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಜ್ವರ, ಕೆಮ್ಮು ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ 82 ವರ್ಷದ ನನ್ನ ಪೂಜ್ಯ ತಂದೆಯವರು ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಪರೀಕ್ಷೆಗೂ ಒಳಗಾಗಿದ್ದಾರೆ. ವರದಿಯ ಫಲಿತಾಂಶವನ್ನು ಕಾಯುತ್ತಿದ್ದೇವೆ. ಅವರು ಶೀಘ್ರ ಗುಣಮುಖರಾಗುವಂತೆ ನೀವೂ ಪ್ರಾರ್ಥಿಸಿ ಎಂದು ಕೋರಿಕೊಳ್ಳುತ್ತಿದ್ದೇನೆ. ನಿಮ್ಮ ಶುಭ ಹಾರೈಕೆಗಳಿರಲಿ ಎಂದಿದ್ದಾರೆ.

ಅಲ್ಲದೆ, ಸುಧಾಕರ್ ನಿವಾಸದಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದ್ದು, ಇದೇ ಕಾರಣದಿಂದ ಇಂದು ಬೆಳಿಗ್ಗೆ ಬಿಎಸ್ ಯಡಿಯೂರಪ್ಪ ನಡೆಸಿದ್ದ ಸಭೆಗೆ ಸಚಿವರು ಗೈರಾಗಿದ್ದರು.

ಈ ಹಿಂದೆಯೂ ಸೋಂಕಿತ ಕ್ಯಾಮರಾಮನ್ ಒಬ್ಬನ ಸಂಪರ್ಕಕ್ಕೆ ಬಂದಿದ್ದ ಸಚಿವರು ಸೆಲ್ಫ್ ಕ್ವಾರಂಟೈನ್ ಗೆ ಒಳಗಾಗಿದ್ದರು. ಇದೀಗ ಸಚಿವರ ಮನೆಗೆಲಸದ ವ್ಯಕ್ತಿಗೆ ಕೊರೋನಾ ಬಂದಿರುವುದು, ಅವರ ತಂದೆಗೆ ಜ್ವರ ಕಾಣಿಸಿಕೊಂಡಿರುವುದು ನಿಜಕ್ಕೂ ಆತಂಕ ಮೂಡಿಸಿದೆ. (ಎಂ.ಎನ್)

 

Leave a Reply

comments

Related Articles

error: