ಮೈಸೂರು

ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವಿಶೇಷ ತರಬೇತಿ

ಮೈಸೂರು ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವಿಶೇಷ ತರಬೇತಿ ಕಾರ್ಯಕ್ರಮವನ್ನು ಭಾರತೀಯ ಭಾಷಾ ಸಂಸ್ಥಾನದ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.

ಕಾರ್ಯಕ್ರಮವನ್ನು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ನಿರ್ದೇಶಕ ಎಸ್.ಚಂದ್ರಶೇಖರ್ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಹಕಾರ ಸಂಘಗಳು ಬೆಳೆಯುತ್ತಿವೆ. ಸಹಕಾರಿ ಸಂಘಗಳಲ್ಲಿ ರೈತರಿಗೆ ಒಂದು ವರ್ಷದ ಅವಧಿಗೆ  0%ಬಡ್ಡಿಯಲ್ಲಿ  ಮೂರು ಲಕ್ಷದವರೆಗೆ ಸಾಲವನ್ನು ನೀಡಲಾಗುತ್ತಿತ್ತು. ಈಗ ಏಪ್ರಿಲ್ ನಿಂದ ಜಾರಿಗೆ ಬರುವಂತೆ ಒಂದು ಲಕ್ಷ ಸಾಲ ತೆಗೆದುಕೊಂಡರೆ 25 ಸಾವಿರ ಹೆಚ್ಚುವರಿಯಾಗಿ ನೀಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ದಾಸಯ್ಯ, ಮೈಸೂರು ಜಿಲ್ಲಾ ಸಹಕಾರ ಒಕ್ಕೂಟದ ಉಪಾಧ್ಯಕ್ಷ ಬಿ.ಎನ್.ಸದಾನಂದ, ಮೈಸೂರು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಹೆಚ್.ವಿ.ರಾಜೀವ್ ಮತ್ತಿತರರು ಉಪಸ್ಥಿತರಿದ್ದರು. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: