ಪ್ರಮುಖ ಸುದ್ದಿ

ಸಚಿವ ಸುಧಾಕರ್ ತಂದೆ, ಪತ್ನಿ, ಮಗಳಿಗೂ ಕೊರೋನಾ ಸೋಂಕು

ಕಾಂಗ್ರೆಸ್ ಮುಖಂಡನ ಪುತ್ರಿಗೂ ಕೊರೋನಾ

ರಾಜ್ಯ(ಬೆಂಗಳೂರು)ಜೂ.23:-   ರಾಜ್ಯದಲ್ಲಿ ಕೊರೋನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರ ತಂದೆಗೆ ಕೊರೋನಾ ವೈರಸ್ ಸೋಂಕಿರುವುದು ದೃಢಪಟ್ಟಿತ್ತು. ಇದೀಗ ಅವರ ಪತ್ನಿ ಹಾಗೂ ಮಗಳಿಗೂ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ.

ಈ ಕುರಿತು ಟ್ವೀಟರ್ ನಲ್ಲಿ ಮಾಹತಿ ನೀಡಿರುವ ಸುಧಾಕರ್, ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗೂ ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕೊರೋನಾ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ ಎಂದು ಹೇಳಿದ್ದಾರೆ.

ಇದೇ ವೇಳೆ ಮಾಗಡಿಯ ಕಾಂಗ್ರೆಸ್ ಮುಖಂಡ ಹೆಚ್.ಸಿ.ಬಾಲಕೃಷ್ಣ ಅವರ ಪುತ್ರಿಗೂ ಕೋವಿಡ್-19 ತಗುಲಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: