ಮೈಸೂರು

ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಲು ಆರ್.ಪಿ.ಐ ಪಣ : ಕೊಮ್ಮರಹಳ್ಳಿ ಕೃಷ್ಣಮೂರ್ತಿ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಲು ಆರ್.ಪಿ.ಐ ಪಣ ತೊಟ್ಟಿದೆ ಎಂದು ಜಿಲ್ಲಾಧ್ಯಕ್ಷ ಕೊಮ್ಮರಹಳ್ಳಿ ಕೃಷ್ಣಮೂರ್ತಿ ತಿಳಿಸಿದ್ದಾರೆ.

ಮೈಸೂರಿನ  ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷವು ಬೆಂಕಿ ಹೊತ್ತಿ ಉರಿಯುತ್ತಿರುವ ಮನೆಯಾಗಿದ್ದು, ಅದನ್ನು ಪ್ರವೇಶಿಸಬೇಡಿ ಎಂದು ಡಾ. ಬಿ.ಆರ್.ಅಂಬೇಡ್ಕರ್ ರವರು ದಲಿತರನ್ನು ಎಚ್ಚರಿಸಿದ್ದರು. ಇದೀಗ ವಿ. ಶ್ರೀನಿವಾಸ್ ಪ್ರಸಾದ್ ರವರು ಕಾಂಗ್ರೆಸ್ ಗೆ ಸವಾಲೆಸೆದು ನಂಜನಗೂಡು ಉಪಚುನಾವಣೆಯನ್ನು ಎದುರಿಸುತ್ತಿದ್ದಾರೆ ಅವರಿಗೆ ನಮ್ಮ ಬೆಂಬಲವಿದೆ. ಗುಂಡ್ಲುಪೇಟೆಯಲ್ಲಿಯೂ ಸಹ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ನಮ್ಮ ಪಕ್ಷದ ಅಭ್ಯರ್ಥಿಯಾಗಿ ಎಂ.ಶಿವರಾಜು ಅವರನ್ನು ಸ್ಪರ್ಧೆಗಿಳಿಸಿದ್ದೇವೆ. ಇವರೂ ಜನಮಾನಸದಲ್ಲಿ ಉಳಿಯುವಂತಹ ಕೆಲಸ ಮಾಡಿದ್ದಾರೆ. ಶಿವರಾಜುರವರನ್ನು ಹೆಚ್ಚು ಮತ ನೀಡಿ   ಗೆಲ್ಲಿಸಬೇಕು.ಇವರು ತೆಗೆದುಕೊಳ್ಳುವ ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಸೋಲುವುದು ಖಚಿತ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಲಯನ್ ಮಂಜುನಾಥ್, ಹೆಚ್.ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: