ಮೈಸೂರು

ಸರ್ಕಾರದ ಆದೇಶಗಳನ್ನು ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲು ಡಿಸಿಪಿ ಡಾ.ಪ್ರಕಾಶ್ ಗೌಡ ಸೂಚನೆ

ಮೈಸೂರು,ಜೂ.23:-   ಮೈಸೂರು ನಗರದಲ್ಲಿ ಕೋವಿಡ್-19 ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿದ್ದು ಸಾರ್ವಜನಿಕರು ವ್ಯಾಪಾರ ಸ್ಥಳಗಳು, ತರಕಾರಿ ಮಾರುಕಟ್ಟೆಗಳು ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಗುಂಪುಗೂಡುತ್ತಿರುವುದು ಕಂಡು ಬಂದಿರುತ್ತದೆ. ಇದರಿಂದ ಕೊರೋನಾ ಸೋಂಕು ಹೆಚ್ಚು  ಹರಡುವ ಸಾಧ್ಯತೆಗಳು ಕಂಡು ಬಂದಿವೆ. ಆದ್ದರಿಂದ  ಇನ್ನು ಮುಂದೆ ಠಾಣಾಧಿಕಾರಿಗಳು ತಮ್ಮ ಠಾಣಾ ಸರಹದ್ದಿನಲ್ಲಿರುವ ವ್ಯಾಪಾರ ಸ್ಥಳಗಳು ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಮತ್ತು ಅಂಗಡಿಯ ಮಾಲೀಕರುಗಳಿಗೆ ಸೂಕ್ತ ಮಾರ್ಗದರ್ಶನ ನೀಡುವಂತೆ ಡಿಸಿಪಿ ಡಾ,ಎ.ಎನ್ ಪ್ರಕಾಶ್ ಗೌಡ ಸೂಚಿಸಿದ್ದಾರೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ, ಮಾಸ್ಕ್ ಧರಿಸುವಂತೆ ಸೂಕ್ತ ಮಾರ್ಗದರ್ಶನ ನೀಡಿ, ಸರ್ಕಾರದ ಆದೇಶಗಳನ್ನು ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕಾನೂನು ರೀತ್ಯಾ ಕ್ರಮ ಕೈಗೊಳ್ಳಿ. ನಿಮ್ಮ ಠಾಣಾ ಸರಹದ್ದಿನಲ್ಲಿರುವ ಅಂಗಡಿ ಮಾಲ್ ಮತ್ತು ಹೋಟೆಲ್ ಗಳ ಮಾಲೀಕರುಗಳಿಗೂ ಸಹ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನಿರ್ದೇಶನ ನೀಡಿ  ಮಾಸ್ಕ್ ಧರಿಸಿದವರಿಗೆ ಮಾತ್ರ ವ್ಯಾಪಾರ ವಹಿವಾಟು ನಡೆಸುವಂತೆ ಸರ್ಕಾರದ ಾದೇಶಗಳನ್ನು ಪಾಲಿಸುವಂತೆ ಸೂಕ್ತ ಮಾರ್ಗದರ್ಶನ ನೀಡಿ, ಉಲ್ಲಂಘಿಸುವವರ ವಿರುದ್ಧ ಕ್ರಮಿನಲ್ ಮೊಕದ್ದಮೆ ದಾಖಲಿಸಿ ಎಂದಿದ್ದಾರೆ.

ಪಿಐ ರವರುಗಳು ನಿಮ್ಮ ಠಾಣಾ ಸರಹದ್ದಿನಲ್ಲಿ ಗಸ್ತಿನಲ್ಲಿದ್ದ ಸಾರ್ವಜನಿಕರು ಹೆಚ್ಚು ಗುಂಪು ಸೇರುವ ಸ್ಥಳಗಳು ಮತ್ತು ವ್ಯಾಪಾರ ಸ್ಥಳಗಳಿಗೆ ಭೇಟಿ ನೀಡಿ ಸರ್ಕಾರದ ಆದೇಶ ಪಾಲಿಸಲಾಗುತ್ತದೆಯೇ ಎಂದು ಪರಿಶೀಲಿಸಿ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಕೊರೋನಾ ಹರಡದಂತೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಿ. ಕೈಗೊಂಡ ಕ್ರಮದ ಬಗ್ಗೆ ಪಾಲನಾ ವರದಿ ಸಲ್ಲಿಸಿ ಎಂದಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: