ದೇಶಮನರಂಜನೆ

ಬಾಲಿವುಡ್ ನ ಹಿರಿಯ ನೃತ್ಯ ಸಂಯೋಜಕಿ ಸರೋಜ್ ಖಾನ್ ಆಸ್ಪತ್ರೆಗೆ ದಾಖಲು

ಮುಂಬೈ,ಜೂ.24-ಬಾಲಿವುಡ್ ನ ಹಿರಿಯ ನೃತ್ಯ ಸಂಯೋಜಕಿ ಸರೋಜ್ ಖಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಸಿರಾಟದ ತೊಂದರೆಯಿಂದ ಅವರನ್ನು ಬಾಂದ್ರಾದಲ್ಲಿರುವ ಗುರುನಾನಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಕೊರೊನಾ ವೈರಸ್ ಪರೀಕ್ಷೆ ಮಾಡಲಾಗಿದ್ದು, ವರದಿ ನೆಗಟಿವ್ ಬಂದಿದೆ.

ಸರೋಜ್ ಖಾನ್ ಅವರಿಗೆ ಉಸಿರಾಟದ ಸಮಸ್ಯೆ ಉಂಟಾಗಿತ್ತು. ಆ ಕಾರಣದಿಂದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈಗ ಅವರು ಆರಾಮಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಕೊರೊನಾ ವೈರಸ್ ಪರೀಕ್ಷೆ ನೆಗೆಟಿವ್ ಎಂದು ಬಂದಿದೆ. ಅವರಲ್ಲಿ ಯಾವುದೇ ಲಕ್ಷಣಗಳಿಲ್ಲ. ಒಂದೆರಡು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬಹುದು ಎಂದು ಕುಟುಂಬದವರು ತಿಳಿಸಿದ್ದಾರೆ.

ಸುಮಾರು ನಾಲ್ಕು ದಶಕಗಳ ಕಾಲ ಚಿತ್ರರಂಗದಲ್ಲಿ ಕೆಲಸ ಮಾಡಿರುವ ಅವರು, 2,000ಕ್ಕೂ ಹೆಚ್ಚು ಹಾಡುಗಳಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ. ಅವುಗಳಲ್ಲಿ ಸಾರ್ವಕಾಲಿಕ ಸೂಪರ್ ಹಿಟ್ ಗೀತೆಗಳಾದ ಡೋಲಾ ರೆ ಡೋಲಾ, ಏಕ್ ದೋ ತೀನ್, ಏ ಇಷ್ಕ್ ಹಾಯೆ, ಚೋಲಿ ಕೆ ಪೀಚೆ ಕ್ಯಾಹೆ, ನಿಂಬೂಡಾ… ಹಾಡುಗಳು ಸೇರಿವೆ. ಮೂರು ಬಾರಿ ಅವರಿಗೆ ರಾಷ್ಟ್ರ ಪ್ರಶಸ್ತಿ ದೊರಕಿದೆ. (ಎಂ.ಎನ್)

Leave a Reply

comments

Related Articles

error: