ಪ್ರಮುಖ ಸುದ್ದಿಮೈಸೂರು

ಮಾಜಿ ಸಂಸದ ಕಾಗಲವಾಡಿ ಶಿವಣ್ಣ ಕಾಂಗ್ರೆಸ್ ಗೆ ಗುಡ್ ಬೈ ಹೇಳಲು ನಿರ್ಧಾರ

ಕಾಂಗ್ರೆಸ್ ಮುಕ್ತ ಭಾರತ ಮಾಡಲು ಕಾಂಗ್ರೆಸ್ ಪಕ್ಷದ ಹಿರಿಯರೇ ಪಣ ತೊಟ್ಟಿರುವಂತಿದೆ. ಇದೀಗ  ಮಾಜಿ ಸಂಸದ ಹಾಗೂ ರಾಷ್ಟ್ರೀಯ ಹಿಂದುಳಿದ ವರ್ಗಗಳ ವಿಭಾಗದ ಮಾಜಿ ಅಧ್ಯಕ್ಷ ಕಾಗಲವಾಡಿ ಎಂ ಶಿವಣ್ಣ ಪಕ್ಷಕ್ಕೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಕಾಗಲವಾಡಿ ಶಿವಣ್ಣ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಂಬಂಧ ಬಿ.ಎಸ್ ಯಡಿಯೂರಪ್ಪ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಮಾತುಕತೆ  ಬಳಿಕ ಮೈಸೂರಿನಲ್ಲಿ ಹೇಳಿಕೆ ನೀಡಿದ ಶಿವಣ್ಣ, ಸದ್ಯದಲ್ಲೇ ನಾನು ಬಿಜೆಪಿ ಪಕ್ಷಕ್ಕೆ  ಸೇರ್ಪಡೆಯಾಗಲಿದ್ದೇನೆ. ಉಪಚುನಾವಣೆಗೂ ಮುನ್ನವೇ ನಾನು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ. ಕಾಂಗ್ರೆಸ್ ಪಕ್ಷದಲ್ಲಿ ನನ್ನನ್ನು ಕಡೆಗಣಿಸಲಾಗಿದೆ. ಕಾಂಗ್ರೆಸ್ ಪಕ್ಷದ ಸ್ಥಿತಿ ಚೆನ್ನಾಗಿಲ್ಲ. ಹಿರಿಯ ನಾಯಕರನ್ನು ಕಡೆಗಣಿಸಲಾಗುತ್ತಿದೆ. ಇದೇ ಕಾರಣದಿಂದ ನಾನು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೆ ತೀರ್ಮಾನಿಸಿದ್ದೇನೆ ಅಂತ ಹೇಳಿದ್ದಾರೆ.  (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: