ಮೈಸೂರು

ಕಲೆ ಮನುಷ್ಯನನ್ನು ಪರಿಪೂರ್ಣವಾಗಿಸಲಿದೆ : ಎಂ.ಜೆ.ರವಿಕುಮಾರ್

ಕಲೆ ಮನುಷ್ಯನನ್ನು ಪರಿಪೂರ್ಣವಾಗಿಸಲಿದ್ದು ಪ್ರತಿಯೊಬ್ಬರು ಒಂದಲ್ಲಾ ಒಂದು ಕಲೆಯಲ್ಲಿತೊಡಗಿಸಿಕೊಳ್ಳಬೇಕು ಎಂದು ಮೇಯರ್ ಎಂ.ಜೆ.ರವಿಕುಮಾರ್ ಅಭಿಪ್ರಾಯಪಟ್ಟರು.
ಶನಿವಾರ ಒರಿಯೋಲಸ್ ವೈಜ್ಞಾನಿಕ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರ ವತಿಯಿಂದ ಆಯೋಜಿಸಿದ್ದ ಎರಡು ದಿನಗಳ ಚಿತ್ರಕಲಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಒತ್ತಡದ ಜೀವನದಲ್ಲಿ ಎಲ್ಲರೂ ಓಡುತ್ತಿರುವ ಸಮಯದೊಂದಿಗೆ ಓಡುತ್ತಿದ್ದಾರೆ. ಯಾರಲ್ಲೂ ಬಿಡುವೇ ಇಲ್ಲ. ಇದರಿಂದ ಮಾನಸಿಕವಾಗಿ ವಿಶ್ರಾಂತಿ ಇಲ್ಲದೆ ಕುಗ್ಗಿ ಹೋಗಿದ್ದಾರೆ. ಹಾಗಾಗಿ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಪ್ರತಿಯೊಬ್ಬರು ಒಂದಲ್ಲಾ ಒಂದು ಕಲೆಯಲ್ಲಿ ತೊಡಗಿಕೊಳ್ಳಬೇಕು ಎಂದು ಹೇಳಿದರು.
ಸಾವಿರ ಪದಗಳಲ್ಲಿ ಹೇಳಲಾಗದ್ದನ್ನು ಕೇವಲ ಒಂದು ಚಿತ್ರ ಹೇಳಲಿದ್ದು, ಅಂತಹ ಒಂದು ಶಕ್ತಿ ಚಿತ್ರಕಲೆಗಿದೆ. ವಿದ್ಯಾರ್ಥಿಗಳು ಚಿತ್ರಕಲೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳುತ್ತಿದ್ದಾರೆ. ಕೇವಲ ಪಠ್ಯಕ್ಕೆ ಸೀಮಿತವಾಗದೆ ಇಂತಹ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ಮಾತ್ರ ಸರ್ವತೋಮುಖ ಬೆಳವಣಿಗೆಯಾಗಲಿದ್ದು ಪ್ರತಿಯೊಬ್ಬ ವಿದ್ಯಾರ್ಥಿಯೂ ಒಂದಲ್ಲಾ ಒಂದು ಕಲೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಮೇಯರ್ ಆರ್.ಲಿಂಗಪ್ಪ, ಡಿಐಸಿ ಜಂಟಿ ನಿರ್ದೇಶಕ ರಾಮಕೃಷ್ಣೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ಬಿ.ಎಂ-ಎಸ್.ಎಚ್)

Leave a Reply

comments

Related Articles

error: