ಕರ್ನಾಟಕಪ್ರಮುಖ ಸುದ್ದಿ

ಪ್ರತಿಯೊಬ್ಬ ಬೆಂಗಳೂರಿಗರು ಕೊರೊನಾ ವಾರಿಯರ್ಸ್ ಆಗಬೇಕಿದೆ: ಭಾಸ್ಕರ್ ರಾವ್ ಟ್ವೀಟ್

ಬೆಂಗಳೂರು,ಜೂ.25-ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಮಧ್ಯೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಟ್ವೀಟ್ ಮಾಡಿ ಬೆಂಗಳೂರಿಗರಲ್ಲಿ ಮನವಿಯೊಂದನ್ನು ಮಾಡಿದ್ದಾರೆ.

ಪ್ರತಿಯೊಬ್ಬ ಬೆಂಗಳೂರಿಗರು ಕೊರೊನಾ ವಾರಿಯರ್ಸ್‌ ಆಗಬೇಕಿದೆ ಎಂದಿದ್ದಾರೆ. ಜೊತೆಗೆ ಶೇ.100ರಷ್ಟು ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಮಾಡುವುದು, ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡಬೇಕು ಎಂದು ಟ್ವೀಟ್ ಮಾಡಿದ್ದಾರೆ.

ಕಳೆದ ಎರಡು ವಾರಗಳಿಂದ ಬೆಂಗಳೂರು ನಗರದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣ ಹೆಚ್ಚುತ್ತಿದೆ. ಹೆಚ್ಚು ಕಡಿಮೆ ಪ್ರತಿದಿನ ಹೊಸ ಪ್ರಕರಣಗಳ ಸಂಖ್ಯೆ 100ರ ಗಡಿಯನ್ನು ದಾಟುತ್ತಿದೆ. ನಿನ್ನೆ 173 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1678ಕ್ಕೆ ಏರಿಕೆಯಾಗಿದೆ. ಇದುವೆರೆಗೂ 475 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 1124 ಸಕ್ರಿಯ ಪ್ರಕರಣಗಳಿವೆ. (ಎಂ.ಎನ್)

 

Leave a Reply

comments

Related Articles

error: