
ಕರ್ನಾಟಕಪ್ರಮುಖ ಸುದ್ದಿ
ಮಂಗಳೂರು: ಐವರು ವೈದ್ಯರಿಗೆ ಕೊರೊನಾ ಸೋಂಕು
ಮಂಗಳೂರು,ಜೂ.25-ಕೊರೊನಾ ವಾರಿಯರ್ಸ್ ಗಳಾದ ವೈದ್ಯರಿಗೂ ಕೊರೊನಾ ಸೋಂಕು ತಗುಲಿದೆ. ಇಲ್ಲಿನ ವಿವಿಧ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿರುವ ಐವರು ವೈದ್ಯರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ.
ಮಂಗಳೂರಿನ ಕೋವಿಡ್ ಆಸ್ಪತ್ರೆ, ಲೇಡಿಗೋಷನ್ ಆಸ್ಪತ್ರೆ ಮತ್ತು ಕೆಎಂಸಿನಲ್ಲಿ ಕೆಲಸ ಮಾಡುತ್ತಿದ್ದ ಐವರು ಪಿಜಿ ವೈದ್ಯರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಪರಿಣಾಮ 30 ವೈದ್ಯರು, ವೈದ್ಯಕೀಯ ಸಿಬ್ಬಂದಿಗಳಿಗೆ ಕ್ವಾರಂಟೈನ್ ಮಾಡಲಾಗಿದೆ.
28 ವರ್ಷದ ಯುವಕ, 28 ವರ್ಷದ ಇಬ್ಬರು ಯುವತಿಯರು, 27 ವರ್ಷದ ಇಬ್ಬರು ಯುವತಿಯರು ಸೇರಿ ಐವರು ವೈದ್ಯರಿಗೆ ಸೋಂಕು ತಗುಲಿದ್ದು, ಆಘಾತ ಉಂಟುಮಾಡಿದೆ.
ಒಬ್ಬರು ಕೋವಿಡ್ ಆಸ್ಪತ್ರೆಯಲ್ಲಿ, ಇನ್ನೊಬ್ಬರು ಕೆ.ಎಂ.ಸಿ. ನಲ್ಲಿ, ಮೂವರು ಲೇಡಿಗೋಷನ್ ಹೆರಿಗೆ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಇವರೆಲ್ಲರೂ ಅತ್ತಾವರದ ಅಪಾರ್ಟ್ಮೆಂಟ್ಗಳಲ್ಲಿ ವಾಸವಿದ್ದರು. (ಎಂ.ಎನ್)