ಮೈಸೂರು

ರೆಡ್ ಕ್ರಾಸ್ ವಿಸ್ತರಿಸಲು ಜಿಲ್ಲಾಡಳಿತ ಚಿಂತನೆ ನಡೆಸಿದೆ : ಡಿ.ರಂದೀಪ್

ರೆಡ್‍ಕ್ರಾಸ್ ಸಂಸ್ಥೆಯನ್ನು ಮೈಸೂರಿನಲ್ಲಿ ಶಕ್ತಿಯುತವಾಗಿ ಬಳಸಿಕೊಳ್ಳಲು, ಅದರ ವ್ಯಾಪ್ತಿಯನ್ನು ವಿಸ್ತರಿಸಲು ಜಿಲ್ಲಾಡಳಿತ ಆಲೋಚಿಸುತ್ತಿದ್ದು, ಅಧಿಕಾರಿಗಳ ಸಲಹೆಗಳನ್ನು ಪಡೆದು ಸಭೆಯನ್ನು ಕರೆದು ಇದರ ಕುರಿತು ಚರ್ಚಿಸಲಾಗುವುದು ಎಂದು ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ತಿಳಿಸಿದರು.

ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಮೈಸೂರು ಜಿಲ್ಲಾಶಾಖೆ ವತಿಯಿಂದ ಮೈಸೂರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಯುವ ರೆಡ್‍ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲಿ ಪ್ರಕೃತಿ ವಿಕೋಪಗಳು ನಡೆದಾಗ ಸರ್ಕಾರದಿಂದಲಷ್ಟೇ ಎಲ್ಲವನ್ನೂ ನಿಭಾಯಿಸಲು ಸಾಧ್ಯವಾಗುವುದಿಲ್ಲ. ರೆಡ್ ಕ್ರಾಸ್ ಸಂಸ್ಥೆಗಳಂತಹ ಸಂಸ್ಥೆಗಳ ಅಗತ್ಯವಿದೆ ಎಂದರು.

ಕಾರ್ಯಕ್ರಮದಲ್ಲಿ ರೆಡ್‍ಕ್ರಾಸ್ ಸಂಸ್ಥೆ ಮೈಸೂರಿನಲ್ಲಿ ತನ್ನ ಅಸ್ತಿತ್ತ್ವ ಹೊಂದಲು ಸಂಸ್ಥೆಯ ಕಚೇರಿ ಸ್ಥಾಪಿಸುವ ಸಲುವಾಗಿ ಜಾಗ ನೀಡಬೇಕೆಂದು ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು.

ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಆರ್.ರಾಜಣ್ಣ ,ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಡಾ.ಎಂ.ಎಸ್.ಜಯಂತ್ ಮತ್ತಿತರರು ಉಪಸ್ಥಿತರಿದ್ದರು. (ಬಿ.ಎಂ-ಎಸ್.ಎಚ್)

Leave a Reply

comments

Related Articles

error: