ಮೈಸೂರು

ಕೊರೋನಾ ಸಂಕಷ್ಟ : ದಿನಸಿ ಕಿಟ್ ವಿತರಣೆ

ಮೈಸೂರು,ಜೂ.26:-ಮಾರಣಾಂತಿಕ ಕೊರೋನಾ ಹರಡುವಿಕೆಯನ್ನು ತಡೆಗಟ್ಟಲು ದೇಶಾದ್ಯಂತ ಲಾಕ್ ಡೌನ್ ಮಾಡಿದ ಹಿನ್ನೆಲೆಯಲ್ಲಿ ಇನ್ನೂ ಕೂಡ  ಮೈಸೂರಿನಲ್ಲಿ ಸಂಕಷ್ಟಕ್ಕೆ ಸಿಲುಕಿರುವವರಿಗೆ ಆಹಾರ ಕಿಟ್ ವಿತರಣೆ ಮಾಡಲಾಗುತ್ತಿದೆ.

ಕೊರೋನಾ ಸಂಕಷ್ಟದಲ್ಲಿರುವವರಿಗೆ ಸ್ವಯಂ ಸೇವಾ ಸಂಸ್ಥೆಗಳಿಂದ ನೆರವಿನ ಕಾರ್ಯ ಮುಂದುವರೆದಿದ್ದು ದೇವರಾಜ್ ಮೂಲಚಂದ್ ನಾಹರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ದಿನಸಿ ಪದಾರ್ಥಗಳ ಕಿಟ್ ವಿತರಣೆ ಮಾಡಲಾಯಿತು. ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ಆಹಾರ ಕಿಟ್ ವಿತರಣೆಗೆ ಚಾಲನೆ ನೀಡಿದರು.

ಸಂಕಷ್ಟಕ್ಕೆ ಒಳಗಾಗಿರುವ ಬಡ ಜನರಿಗೆ ದಿನಸಿ ಪದಾರ್ಥಗಳ ಕಿಟ್ ನ್ನು ಡಾ.ಸಿ.ಎನ್ ಮೃತ್ಯುಂಜಯಪ್ಪನವರ ಕುಟುಂಬದವರಿಂದ ವಿತರಣೆ ಮಾಡಲಾಯಿತು.  ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದ ಆವರಣದಲ್ಲಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಶಾಸಕ ನಾಗೇಂದ್ರ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: