ಪ್ರಮುಖ ಸುದ್ದಿಮೈಸೂರು

ನಾಡಪ್ರಭು ಕೆಂಪೇಗೌಡ ಜಯಂತಿಗೆ ಶುಭ ಕೋರಿದ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು,ಜೂ.27:-  ಎಲ್ಲರಿಗೂ ನಾಡಪ್ರಭು ಕೆಂಪೇಗೌಡ ಜಯಂತಿಯ ಶುಭಾಶಯಗಳು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು ಕರ್ನಾಟಕಕ್ಕೆ ನಾಡಪ್ರಭು ಕೆಂಪೇಗೌಡರ ಕೊಡುಗೆ ಅಪಾರ. ಅವರ ದೂರದೃಷ್ಟಿಯ ಫಲವನ್ನು ಇಂದು ನಾವುಗಳು ಅನುಭವಿಸುತ್ತಿದ್ದೇವೆ. ಅವರು ಅಂದು ನಿರ್ಮಿಸಿದ ಬೆಂಗಳೂರು ನಗರವು ಇಂದು ಕರ್ನಾಟಕ ರಾಜಧಾನಿಯಾಗಿ ವಿಸ್ತೃತವಾಗಿ ಬೃಹತ್ ಪ್ರಮಾಣದಲ್ಲಿ ಬೆಳೆದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುಗಳಿಸುವಂತಾಗಿದೆ. ಅವರು ನಿರ್ಮಿಸಿದ ಅನೇಕ ಕೆರೆ, ದೇವಾಲಯಗಳ, ಕೋಟೆ ಕೊತ್ತಲಗಳು ಅವರ ಸಮಾಜಮುಖಿ ಕಾರ್ಯವೈಖರಿಗೆ ನಿದರ್ಶನ. ಇಂತಹ ಮಹಾನೀಯರನ್ನು ನೆನೆಯುವುದು ನಮ್ಮ ಕರ್ತವ್ಯ ಕೂಡಾ. ಇದಕ್ಕೆಂದೇ ಪ್ರತಿ ವರ್ಷ ಸರ್ಕಾರದ ವತಿಯಿಂದ ಕೆಂಪೇಗೌಡರ ಜಯಂತಿಯನ್ನು ಆಚರಿಸಿಕೊಂಡು ಬರುತ್ತಿದ್ದೇವೆ.  ಇಂದು ಮೈಸೂರಿನಲ್ಲಿ ನಡೆಯುತ್ತಿರುವ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ನನಗೆ ಪಾಲ್ಗೊಳ್ಳಲು ಸಾಧ್ಯವಾಗದಿರುವ ಬಗ್ಗೆ ಬೇಸರವಿದೆ. ಆಶಾಕಾರ್ಯಕರ್ತೆಯರಿಗೆ ಸಹಾಯಧನ ವಿತರಣೆ ಹಾಗೂ ಡಿಸಿಸಿ ಬ್ಯಾಂಕ್ ಪ್ರಗತಿ ಪರಿಶೀಲನೆ ಸಂಬಂಧ ಅಂದು ನಾನು ರಾಜ್ಯ ಪ್ರವಾಸದಲ್ಲಿರುವ ಕಾರಣ ಕಾರ್ಯಕ್ರಮಕ್ಕೆ ಬರಲಾಗುತ್ತಿಲ್ಲ ಎಂದಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: