ಕರ್ನಾಟಕಪ್ರಮುಖ ಸುದ್ದಿ

ಹಾಸನ: ಎಸ್ಎಸ್ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗೆ ಕೊರೊನಾ ಸೋಂಕು

ಹಾಸನ,ಜೂ.27-ಎಸ್ಎಸ್ಎಲ್ ಸಿ ವಿದ್ಯಾರ್ಥಿಯೊಬ್ಬನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೀಗ ಈತನೊಂದಿಗೆ ಪರೀಕ್ಷೆ ಬರೆದಿದ್ದ 18 ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ.

ಸೋಂಕಿತ ವಿದ್ಯಾರ್ಥಿಗೆ ಸ್ವ್ಯಾಬ್ ವರದಿ ಬರೋ ಮುನ್ನವೇ ಎಲ್ಲ ವಿದ್ಯಾರ್ಥಿಗಳ ಜೊತೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಆದರೆ, ಇದೀಗ ಬಂದ ರಿಪೋರ್ಟ್‌ನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಈ ವಿದ್ಯಾರ್ಥಿಗೆ ಡೆಂಗ್ಯೂ ಉಂಟಾಗಿತ್ತು. ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋದಾಗ, ಕೊರೊನಾ ಟೆಸ್ಟ್ ಗೆ ಸ್ವ್ಯಾಬ್ ಪಡೆಯಲಾಗಿತ್ತು. ಟೆಸ್ಟ್‌ ರಿಪೋರ್ಟ್‌ ಬರುವ ಮುನ್ನವೇ, ಎಲ್ಲ ವಿದ್ಯಾರ್ಥಿಗಳ ಜತೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಅಧಿಕಾರಿಗಳ ನಿರ್ಲಕ್ಷ್ಯದಿಂದ 18 ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರು ಇದೀಗ ಆತಂಕದಲ್ಲಿದ್ದಾರೆ.

ಈತನೊಂದಿಗೆ ಪರೀಕ್ಷೆ ಬರೆದ 18 ವಿದ್ಯಾರ್ಥಿಗಳಲ್ಲದೆ, ಇತರೆ ಹಲವು ವಿದ್ಯಾರ್ಥಿಗಳ ಜೊತೆ ಸೋಂಕಿತ ವಿದ್ಯಾರ್ಥಿ  ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ. ಇದೀಗ ಅವರಿಗೂ ಕೊರೊನಾ ಭಯ ಉಂಟಾಗಿದೆ. ಸೋಂಕಿತ ವಿದ್ಯಾರ್ಥಿಯು ಮಲ್ಲಿಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆದಿದ್ದ. ಇದೀಗ ಮುಂಜಾಗ್ರತಾ ಕ್ರಮವಾಗಿ ಆತನ ಜೊತೆ ಪರೀಕ್ಷೆ ಬರೆದವರನ್ನ ಪ್ರತ್ಯೇಕಿಸಲಾಗಿದೆ.

ರಾಜ್ಯದ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳ ಸಲಹೆ ಪಡೆದ ಬಳಿಕವೇ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ. ಬಾಗಲಕೋಟೆಯಲ್ಲಿಯೂ ಇಬ್ಬರು ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವ ವರದಿಯಾಗಿದೆ. (ಎಂ.ಎನ್)

 

Leave a Reply

comments

Related Articles

error: