ಮೈಸೂರು

ಸರಳ, ಸಾಂಕೇತಿಕವಾಗಿ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿ

ಮೈಸೂರು. ಜೂ.27:-  ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಸರಳವಾಗಿ ಹಾಗೂ ಸಾಂಕೇತಿಕವಾಗಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಶನಿವಾರ ಕಲಾಮಂದಿರದಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ಸಂದೇಶ ವಾಚಿಸಲಾಯಿತು. ಸಮಸ್ತ ನಾಗರಿಕ ಬಂಧುಗಳಿಗೆ ನಾಡಪ್ರಭು ಕೆಂಪೇಗೌಡ ಜಯಂತಿಯ ಶುಭಾಶಯಗಳು. ಕರ್ನಾಟಕಕ್ಕೆ ಕೆಂಪೇಗೌಡರ ಕೊಡುಗೆ ಅಪಾರ. ಅವರ ದೂರದೃಷ್ಟಿಯ ಫಲವನ್ನು ಇಂದು ನಾವುಗಳು ಅನುಭವಿಸುತ್ತಿದ್ದೇವೆ. ಅವರು ಅಂದು ನಿರ್ಮಿಸಿದ ಬೆಂಗಳೂರು ನಗರವು ಇಂದು ಕರ್ನಾಟಕ ರಾಜಧಾನಿಯಾಗಿ ವಿಸ್ತೃತವಾಗಿ ಬೃಹತ್ ಪ್ರಮಾಣದಲ್ಲಿ ಬೆಳೆದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುಗಳಿಸುವಂತಾಗಿದೆ.

ಅವರು ನಿರ್ಮಿಸಿದ ಅನೇಕ ಕೆರೆ, ದೇವಾಲಯಗಳ, ಕೋಟೆ ಕೊತ್ತಲಗಳು ಅವರ ಸಮಾಜಮುಖಿ ಕಾರ್ಯವೈಖರಿಗೆ ನಿದರ್ಶನ. ಇಂತಹ ಮಹಾನೀಯರನ್ನು ನೆನೆಯುವುದು ನಮ್ಮ ಕರ್ತವ್ಯ ಕೂಡಾ. ಇದಕ್ಕೆಂದೇ ಪ್ರತಿ ವರ್ಷ ಸರ್ಕಾರದ ವತಿಯಿಂದ ಕೆಂಪೇಗೌಡರ ಜಯಂತಿಯನ್ನು ಆಚರಿಸಿಕೊಂಡು ಬರುತ್ತಿದ್ದೇವೆ ಎಂಬ ಸಚಿವರ ಸಂದೇಶ ವಾಚಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಸಕರಾದ ಜಿ‌.ಟಿ.ದೇವೇಗೌಡ, ಎಲ್.ನಾಗೇಂದ್ರ, ಸಂಸದ ಪ್ರತಾಪ ಸಿಂಹ, ಅಪರ ಜಿಲ್ಲಾಧಿಕಾರಿ ಬಿ.ಆರ್.ಪೂರ್ಣಿಮಾ, ಉಪವಿಭಾಗಧಿಕಾರಿ ಡಾ.ವೆಂಕಟರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಚನ್ನಪ್ಪ ಇತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: