ಮೈಸೂರು

ಜು.1 : ಪತ್ರಿಕಾ ದಿನಾಚರಣೆ, ವ್ಯಾಯಾಮಶಾಲೆ ಉದ್ಘಾಟನೆ 

ಮೈಸೂರು,ಜೂ.29:- ತ್ಯಾಗರಾಜ ರಸ್ತೆಯಲ್ಲಿರುವ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಜು.1ರಂದು ಪತ್ರಿಕಾ ದಿನಾಚರಣೆ, ವ್ಯಾಯಾಮಶಾಲೆ ಉದ್ಘಾಟನೆ  ಅಭಿನಂದನಾ  ಕಾರ್ಯಕ್ರಮವನ್ನುಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 9.30ಕ್ಕೆ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ವ್ಯಾಯಾಮ ಶಾಲೆಯನ್ನು ಲೋಕಾರ್ಪಣೆ ಮಾಡಲಿದ್ದು, ಅಭಿನಂದಿತರಿಗೆ ಸಚಿವ ಎಸ್.ಟಿ.ಸೋಮಶೇಖರ್ ಸನ್ಮಾನಿಸಲಿದ್ದಾರೆ. ಪತ್ರಿಕಾ ದಿನಾಚರಣೆ ಉದ್ಘಾಟನೆಯನ್ನು ಮಾಜಿ ಶಾಸಕ ವಾಸು ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದ ಪ್ರತಾಪ್ ಸಿಂಹ, ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ, ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಪಾಲ್ಗೊಳ್ಳಲಿದ್ದಾರೆ.

ಟಿಎಸ್ಸಾರ್ ಪ್ರಶಸ್ತಿ ಪುರಸ್ಕೃತ ಡಿ.ಮಹಾದೇವಪ್ಪ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸಂಪತ್ ಕುಮಾರ್ ಹಾಗೂ ವಿಜಯಲಕ್ಷ್ಮಿ ಅವರನ್ನು ಅಭಿನಂದಿಸಲಾಗುತ್ತಿದ್ದು, ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ಕೆ.ಜೆ.ಲೋಕೇಶ್ ಬಾಬು ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: