ಪ್ರಮುಖ ಸುದ್ದಿ

ಜು.2 : ಸಹಕಾರ ಸಚಿವ ಸೋಮಶೇಖರ್ ಭೇಟಿ

ರಾಜ್ಯ( ಮಡಿಕೇರಿ) ಜೂ.29 : ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಜು.2 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ನಗರದಲ್ಲಿ ಬೆಳಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾ ಆಶಾ ಕಾರ್ಯಕರ್ತೆಯರಿಗೆ ಸಾಂಕೇತಿಕವಾಗಿ ಪ್ರೋತ್ಸಾಹಧನ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಅಪರಾಹ್ನ 12 ಗಂಟೆಗೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರಗತಿ ಪರಿಶೀಲನಾ ಸಭೆಯನ್ನು ನಗರದಲ್ಲಿ ನಡೆಸಲಿದ್ದಾರೆ ಎಂದು ಸಹಕಾರ ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: